ಹೆದ್ದಾರಿಯಲ್ಲಿಯೇ ಹೊತ್ತಿ ಉರಿದ ಕಾರ್ – ನಾಲ್ವರು ಪಾರು

Public TV
1 Min Read

ಬಾಗಲಕೋಟೆ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೈವೆ ರಸ್ತೆ ಬಳಿ ಕಾರೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಬದಾಮಿ ತಾಲೂಕಿನ ಕೆರೂರು ಪಟ್ಟಣದ ಹುಲಮನಿ ಪೆಟ್ರೋಲ್ ಬಂಕ್ ಬಳಿ ಈ ಘಟನೆ ಸಂಭವಿಸಿದೆ.

ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ ಕಾರ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಪಾರಾಗಿದ್ದಾರೆ. ಬೀಳಗಿ ಮೂಲದ ಸುಂದರ್ ಕೊಡಗ ಅವರಿಗೆ ಸೇರಿದ್ದ ಕಾರ್ ಇದಾಗಿದೆ. ಕಾರ್ ಹುಲಮನಿ ಪೆಟ್ರೋಲ್ ಬಂಕ್ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಈ ಬಗ್ಗೆ ಗಮನ ಹರಿಸಿದ ಕಾರನಲ್ಲಿದ್ದ ಪ್ರಯಾಣಿಕರು ತಕ್ಷಣ ಕಾರಿನಿಂದ ಕೆಳಗಿಳಿದಿದ್ದಾರೆ.

ಈ ಅವಘಡದಿಂದ ಸ್ವಿಫ್ಟ್ ಕಾರು ಧಗಧಗ ಹೊತ್ತಿ ಉರಿದಿದ್ದು, ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *