ಯೋಧನ ಮನೆಯಲ್ಲಿ ಬೆಂಕಿ – ಸುಟ್ಟು ಕರಕಲಾದ 20 ಲಕ್ಷ ರೂ. ಮೌಲ್ಯದ ವಸ್ತುಗಳು

Public TV
1 Min Read

ವಿಜಯನಗರ/ದಾವಣಗೆರೆ: ವಿಜಯನಗರ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಹಾರಕನಾಳು ದೊಡ್ಡ ತಾಂಡದಲ್ಲಿ ಯೋಧರೊಬ್ಬರ ಮನೆಗೆ ಆಕಸ್ಮಿಕ ಬೆಂಕಿ ಬಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಯೋಧ ಪಿರ್ಯಾ ನಾಯ್ಕ್ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. 20 ಲಕ್ಷ ರೂ. ಮೌಲ್ಯದ ನಗದು, ಒಡವೆ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: ಮುಂದಿನ ವಾರ ಬರಗಾಲ ಘೋಷಣೆ ಮಾಡ್ತೀವಿ – ಕೇಂದ್ರದ ಸಹಾಯ ಕೇಳ್ತೀವಿ: ಸಿದ್ದರಾಮಯ್ಯ

ತನ್ನ ಕುಟುಂಬ ಸಮೇತ ಸಹೋದರಿ ಮನೆಗೆ ಯೋಧ ಪಿರ್ಯಾ ನಾಯ್ಕ್ ತೆರಳಿದ್ದ. ಈ ವೇಳೆ ಮನೆಯಲ್ಲಿ ಪ್ರೀಜ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ನಂತರ ವಿಷಯ ತಿಳಿದು ಹರಪ್ಪನಹಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿನ ಬಹುತೇಕ ವಸ್ತುಗಳು ಸುಟ್ಟು ಸಂಪೂರ್ಣ ಹಾನಿಯಾಗಿವೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿದೆ: ಹೆಚ್.ಡಿ.ಕುಮಾರಸ್ವಾಮಿ

ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸರ್ಕಾರದಿಂದ ಪರಿಹಾರ ನೀಡುವ ಭರವಸೆಯನ್ನು ಅಧಿಕಾರಿಗಳು ಕೊಟ್ಟಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್