ಒಟ್ಟಾವಾ: ಹಾಸ್ಯ ನಟ ಕಪಿಲ್ ಶರ್ಮಾ (Kapil Sharma) ಅವರ ಕೆನಡಾದ (Canada) ಕೆಫೆ ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಆಡಿಯೋವೊಂದು ವೈರಲ್ ಆಗಿದೆ. ಬಿಷ್ಣೋಯ್ ಗ್ಯಾಂಗ್‌ನ (Bishnoi Gang) ಹ್ಯಾರಿ ಬಾಕ್ಸರ್ ಎಂಬಾತನ ಆಡಿಯೋ ಇದಾಗಿದ್ದು, ನಟ ಸಲ್ಮಾನ್ ಖಾನ್‌ನ್ನು (Salman Khan) ಕೆಫೆ ಉದ್ಘಾಟನೆಗೆ ಆಹ್ವಾನಿಸಿದಕ್ಕಾಗಿ ಶೂಟೌಟ್ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ವೈರಲ್ ಆದ ಆಡಿಯೋದಲ್ಲಿ, ಕಪಿಲ್ ಶರ್ಮಾ ತಮ್ಮ ಕೆಫೆ ಉದ್ಘಾಟನೆಗೆ ಸಲ್ಮಾನ್ ಖಾನ್ ಅವರನ್ನು ಆಹ್ವಾನಿಸಿದ್ದಕ್ಕಾಗಿ ಗುಂಡಿನ ದಾಳಿ ನಡೆಸಲಾಗಿದೆ. ಅದಲ್ಲದೇ ಸಲ್ಮಾನ್ ಖಾನ್ ಜೊತೆಗೆ ಕೆಲಸ ಮಾಡುವ ಯಾವುದೇ ನಿರ್ದೇಶಕ, ನಿರ್ಮಾಪಕ ಅಥವಾ ಕಲಾವಿದರ ಎದೆಗೆ ಗುಂಡು ಹಾರಿಸುತ್ತೇವೆ. ನಾವು ಯಾರನ್ನೂ ಬಿಡುವುದಿಲ್ಲ. ಸಲ್ಮಾನ್ ಖಾನ್ ಜೊತೆ ಇರುವವರನ್ನು ಕೊಲ್ಲಲು ನಾವು ಯಾವ ಹಂತಕ್ಕೆ ಬೇಕಾದರೂ ಹೋಗುತ್ತೇವೆ. ನೆನಪಿರಲಿ, ನಿಮ್ಮ ಸಾವಿಗೆ ನೀವೇ ಕಾರಣರಾಗುತ್ತೀರಿ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ:ಚುನಾವಣಾ ಆಯೋಗ ಬಿಜೆಪಿಯ ಬ್ರ್ಯಾಂಚ್ ಆಫೀಸ್: ಸಿದ್ದರಾಮಯ್ಯ
ಆ.7ರಂದು ಬೆಳಗಿನ ಜಾವ 4:30ರ ಸುಮಾರಿಗೆ ಅಪರಿಚಿತ ವ್ಯಕ್ತಿಗಳು ಬಂದು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ 9 ರಿಂದ 10 ಗುಂಡುಗಳು ಕೆಫೆಯ ಗೋಡೆಗೆ ಹಾಗೂ ಕಿಟಿಕಿಗಳಿಗೆ ತಾಗಿವೆ. ಗುಂಡಿನ ಸದ್ದು ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಕಪಿಲ್ ಶರ್ಮಾ ಕೆಫೆಯ ನಡೆದ ಎರಡನೇ ದಾಳಿ ಇದಾಗಿದೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಗೋಲ್ಡಿ ಧಿಲ್ಲೋನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗುಂಡಿನ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ.
ಜೂ.21ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರದರ್ಶನಗೊಂಡಿದ್ದ `ದಿ ಗ್ರೇಟ್ ಇಂಡಿಯನ್ ಕಪಿಲ್ ಶೋ’ನ ಸೀಸನ್-3ರ ಮೊದಲ ಎಪಿಸೋಡ್‌ನಲ್ಲಿ ಸಲ್ಮಾನ್ ಕಾಣಿಸಿಕೊಂಡಿದ್ದರು. ಕೆಫೆ ಉದ್ಘಾಟನೆಗಾಗಿ ಸಲ್ಮಾನ್ ಖಾನ್ ಅವರನ್ನು ಕಪಿಲ್ ಆಹ್ವಾನಿಸಿದ್ದರು. ಇದರ ಬೆನ್ನಲ್ಲೇ ಜು.10ರಂದು ಕೆಫೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಆ ಸಮಯದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ಜೀತ್ ಸಿಂಗ್ ಲಡ್ಡಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದ.ಇದನ್ನೂ ಓದಿ: ಒಂದು ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ 9 ಕೋಟಿ ಹಣ ಕಳೆದುಕೊಂಡ 80ರ ವೃದ್ಧ