ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
1 Min Read

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಗೋಕಾಕ್‌ನ ಲಕ್ಷ್ಮಿದೇವಿ ಜಾತ್ರೆಯಲ್ಲಿ ಸಾರ್ವಜನಿಕವಾಗಿ ಗುಂಡು ಹಾರಿಸಿದ್ದಾರೆ. ಈ ಸಂಬಂಧ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಾವಿರಾರು ಜನರ ಮಧ್ಯೆ ನಿಂತು ಸಂತೋಷ್‌ ಜಾರಕಿಗೊಳಿ ಜಾತ್ರಾ ಮಹೋತ್ಸವದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದ್ದಂತೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು. ಪೊಲೀಸರು ಸ್ಥಳದಲ್ಲಿದ್ದರೂ ತಡೆದಿಲ್ಲ ಎಂದು ಜನ ಅಸಮಾಧಾನ ಹೊರಹಾಕಿದ್ದರು.

ಈ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋ ಆಧರಿಸಿ ಗೋಕಾಕ್ ಶಹರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಎಸ್‌ಪಿ ಭೀಮಾಶಂಕರ್ ಗುಳೇದ್ ಮಾಹಿತಿ.

Share This Article