ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿ ಮೇಲೆ ಫೈರಿಂಗ್‌!

Public TV
1 Min Read

ಕಲಬುರಗಿ: ಅಕ್ರಮವಾಗಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಯ ಮೇಲೆ ಬೆಳ್ಳಂಬೆಳಗ್ಗೆ ಪೋಲಿಸರು ಫೈರಿಂಗ್ ಮಾಡಿರುವ ಘಟನೆ ನಗರದ ಹೊರವಲಯದ ತಾವರಗೇರಾ (Tavaragera ) ಬಳಿ ನಡೆದಿದೆ.

ಆರೋಪಿಯನ್ನು ಸುಪ್ರೀತ್ ನವಲೆ (32 ) ಎಂದು ಗುರುತಿಸಲಾಗಿದೆ. ಆರೋಪಿ ಅಕ್ರಮವಾಗಿ ಕಾರಿನಲ್ಲಿ ಡ್ರಗ್ಸ್‌ನ್ನು ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಖಾಕಿ ಪಡೆ ದಾಳಿ ಮಾಡಿದ್ದು, ಕಾರು ನಿಲ್ಲಿಸಿ ತಪಾಸಣೆ ಮಾಡುವಾಗ ಪೋಲಿಸರ ಮೇಲೆ ಚಾಕುವಿನಿಂದ ಆರೋಪಿ ದಾಳಿ ಮಾಡಿದ್ದಾನೆ. ಹೆಡ್ ಕಾನ್‌ಸ್ಟೇಬಲ್ ಗುರುಮೂರ್ತಿಯ ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದು, ಈ ವೇಳೆ ಚೌಕ್ ಪೋಲಿಸ್ ಠಾಣೆಯ ಪಿಐ ರಾಘವೇಂದ್ರ ಅವರು ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ.ಇದನ್ನೂ ಓದಿ: ಮದ್ವೆಯಾಗುವಂತೆ ಒತ್ತಡ – ಲಿವ್‌ ಇನ್‌ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ

ಫೈರಿಂಗ್ ಮಾಡಿದ ಪರಿಣಾಮ ಆರೋಪಿ ಗಾಯಗೊಂಡಿದ್ದು, ಜಿಮ್ಸ್ ಆಸ್ಪತ್ರೆಯ ಟ್ರಾಮಾ ಕೆರ್ ಸೆಂಟರ್‌ಗೆ ದಾಖಲು ಮಾಡಲಾಗಿದೆ. ಇನ್ನೂ ಪ್ರಕರಣ ಸಂಬಂಧ ಅಸ್ಪತ್ರೆಗೆ ಪೊಲೀಸ್ ಆಯುಕ್ತ‌ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2016 ರಿಂದ ಆರೋಪಿ ಅಕ್ರಮ ಡ್ರಗ್ ಸಪ್ಲೈ‌ ಮಾಡುತ್ತಿದ್ದು, ಒಟ್ಟು 3 ಪ್ರಕರಣಗಳು ನಮ್ಮ ಜಿಲ್ಲೆಯಲ್ಲಿ ದಾಖಲಾಗಿವೆ. ಅಲ್ಲದೆ ನೆರೆಯ ಹೈದ್ರಾಬಾದ್‌ನಲ್ಲಿ ಸಹ ಅಕ್ರಮ ಡ್ರಗ್ಸ್‌ ಮಾರಾಟ ಸಂಬಂಧ ಆರೋಪಿ ಮೇಲೆ ಪ್ರಕರಣ ದಾಖಲಾಗಿರುವುದ್ದಾಗಿ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಅಭಿನೇತ್ರಿಯ ಕಾಲು ಹಿಡಿದು ಕ್ಷಮೆ ಕೇಳಬೇಕು – ಸಿ.ಟಿ ರವಿಗೆ ಅನಾಧೇಮಯ ಬೆದರಿಕೆ ಪತ್ರ

Share This Article