ನಾಳೆ ಪ್ರಭಾಸ್ ನಟನೆಯ ‘ಪ್ರಾಜೆಕ್ಟ್ ಕೆ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

By
1 Min Read

ತೆಲುಗಿನ ಖ್ಯಾತ ನಟ ಪ್ರಭಾಸ್ (Prabhas) ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಾಂಬಿನೇಷನ್ ನ ಪ್ರಾಜೆಕ್ಟ್ ಕೆ (Project K) ಸಿನಿಮಾದ ಫಸ್ಟ್ ಲುಕ್ ನಾಳೆ ಮಧ್ಯಾಹ್ನ 01.23ಕ್ಕೆ ಬಿಡುಗಡೆ ಆಗಲಿದೆ. ಈ ಫಸ್ಟ್ ಲುಕ್ (First Look) ಅನ್ನು ಸ್ಯಾನ್ ಡಿಯಾಗೋ ಕಾಮಿಕ್ ನಲ್ಲಿ ರಿಲೀಸ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಪ್ರಾಜೆಕ್ಟ್ ಕೆ ಸಿನಿಮಾದ ಹಲವಾರು ವಿಚಾರಗಳನ್ನು ಇದೇ ಜುಲೈ 20 ಹಾಗೂ 21ರಂದು ವಿಶ್ವದಾದ್ಯಂತ ಹಂಚಿಕೊಳ್ಳುತ್ತಿದೆ ಚಿತ್ರತಂಡ. ಇದರ ಭಾಗವಾಗ ಫಸ್ಟ್ ಗ್ಲಿಂಪ್ಸ್ (First Glimpses) ಅನ್ನು ಬಿಡುಗಡೆ ಮಾಡಲಿದೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಕಮಲ್ ಹಾಸನ್ ಸೇರಿದಂತೆ ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಲಿದ್ದಾರೆ. ಇದನ್ನೂ ಓದಿ:ಸುದೀಪ್ ಮೇಲಿನ ಆರೋಪ: ಬಹಿರಂಗವಾಗಿ ದಾಖಲೆ ಕೊಡಲ್ಲ ಎಂದ ಕುಮಾರ್

`ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ (Deepika Padukone) ಈಗ ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ. `ಪಠಾಣ್’ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್