ಬೆಂಗಳೂರು: ಬಾಹ್ಯಾಕಾಶದಲ್ಲಿ ಭಾರತೀಯ ಆಂತರಿಕ್ಷ ನಿಲ್ದಾಣದ ಮೊದಲ ಮಾಡ್ಯೂಲ್ 2028ಕ್ಕೆ ಸ್ಥಾಪನೆಯಾಗುವ ನಿರೀಕ್ಷೆಯಿದೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ (V Narayanan) ತಿಳಿಸಿದ್ದಾರೆ.
ಬೆಂಗಳೂರಿನ ಟೆಕ್ ಸಮ್ಮಿಟ್‌ನಲ್ಲಿ ಮಾತನಾಡಿದ ಅವರು, ಭಾರತದ ಮೊದಲ ಮಾನವಸಹಿತ ಗಗನಯಾನಕ್ಕೆ ಪೂರ್ವ ಸಿದ್ಧತೆಗಳು ನಡೆದಿವೆ. ಈಗಾಗಲೇ ನಿಗದಿಯಾಗಿರುವ ಮೊದಲ ಮಾನವಸಹಿತ ಬಾಹ್ಯಾಕಾಶ ಯಾನವನ್ನು ಯಾವುದೇ ಸಮಯದಲ್ಲಿ ಪ್ರಾರಂಭಿಸಲು ಸಿದ್ಧರಾಗಿದ್ದೇವೆ. 80 ಸಾವಿರಕ್ಕೂ ಹೆಚ್ಚು ಪರೀಕ್ಷೆ ನಡೆದಿದೆ. ಪ್ರಧಾನಿ ಮೋದಿ ಇನ್ನೂ ಸಮಯ ನಿಗದಿ ಮಾಡಿಲ್ಲ ಎಂದು ಹೇಳಿದ್ದಾರೆ.ಇದನ್ನೂ ಓದಿ:ಮಂತ್ರಿ ಮಾಲ್ ರೀ ಓಪನ್ – 30 ಕೋಟಿ ತೆರಿಗೆ ಪಾವತಿಗೆ 2 ವಾರ ಗಡುವು ನೀಡಿದ ಕೋರ್ಟ್
ಇನ್ನು ಮೊದಲ ಮಾನವಸಹಿತ ಗಗನಯಾನ ಕಾರ್ಯಾಚರಣೆಯ ವೇಳಾಪಟ್ಟಿ ಮತ್ತು 2035ಕ್ಕೆ ನಿಗದಿಪಡಿಸಲಾದ ಭಾರತೀಯ ಆಂತರಿಕ್ಷ ನಿಲ್ದಾಣ ಸ್ಥಾಪನೆಯ ವೇಳಾಪಟ್ಟಿಯ ಪ್ರಕಾರವಾಗಿದೆ. ಹ್ಯಾಕಾಶದಲ್ಲಿ ಭಾರತೀಯ ಅಂತರಿಕ್ಷ ನಿಲ್ದಾಣದ(ಬಿಎಎಸ್) ಮೊದಲ ಮಾಡ್ಯೂಲ್ 2028ಕ್ಕೆ ಬಾಹ್ಯಾಕಾಶದಲ್ಲಿ ಸ್ಥಾಪಿಸುವ ನಿರೀಕ್ಷೆಯಿದೆ ಎಂದಿದ್ದಾರೆ.

