ಬೂತ್ ಗೆದ್ದರೆ, ದೇಶ ಗೆಲ್ತೇವೆ: ಬಿವೈ ವಿಜಯೇಂದ್ರ

Public TV
1 Min Read

ಬೆಂಗಳೂರು: ಬೂತ್ ಗೆದ್ದರೆ ದೇಶ ಗೆಲ್ತೇವೆ ಎಂಬುದು ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರ ವಿಶ್ವಾಸವಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಬೂತ್‍ಗಳಲ್ಲಿಯೂ ಪಕ್ಷದ ಸಂಘಟನೆಯನ್ನು ಬಲ ಪಡಿಸುತ್ತೇವೆ ಎಂದು ಬಿಜೆಪಿಯ (BJP) ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷನಾದ ಮೊದಲ ದಿನವೇ ಬೂತ್ ಅಧ್ಯಕ್ಷ ಶಶಿಧರ್ ಮನೆಗೆ ಬಂದಿದ್ದೇನೆ. ಈಗಿನ ಘಟಾನುಘಟಿ ನಾಯಕರೆಲ್ಲ ಬೂತ್ ಅಧ್ಯಕ್ಷರಾಗಿ ಬಂದವರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಸಿಗುವ ಗೌರವ ಬೂತ್ ಅಧ್ಯಕ್ಷರಿಗೂ ಸಿಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಾಮಾನ್ಯ ಕಾರ್ಯಕರ್ತನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ – ಸಿಹಿ ತಿನ್ನಿಸಿ, ಸನ್ಮಾನಿಸಿ ಸಂಭ್ರಮಾಚರಣೆ

ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಯಾವುದೇ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರುವವರಲ್ಲ. ಕಾಂಗ್ರೆಸ್ ಪಕ್ಷದವರು ಏನು ಮಾಡುತ್ತಾರೋ ಮಾಡಲಿ. ಮುಂದೆ ಅವರಿಗೆ ನಾವೆಲ್ಲರೂ ತಕ್ಕ ಉತ್ತರ ಕೊಡುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ: ಅಸಮಾಧಾನ ಹೊರಹಾಕಿದ ಸಿಟಿ ರವಿ

Share This Article