– 2028ರ ಚುನಾವಣಾ ಭವಿಷ್ಯ ಗ್ಯಾರಂಟಿ ಸಮಿತಿಗಳ ಕೈಯಲ್ಲಿದೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ವೇಳೆ, ಜಿಬಿಎ ರಚನೆ ಮಾಡಲಾಗಿದೆ. ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೃದಯ ಸಂಬಂಧಿ ರೋಗ ಲಕ್ಷಣಗಳಿದ್ರೆ ಮಾತ್ರ ಆಸ್ಪತ್ರೆಗೆ ಹೋಗಿ, ಆತಂಕ ಬೇಡ – ಶರಣ ಪ್ರಕಾಶ ಪಾಟೀಲ್
ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು. ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ. ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು. ನಮ್ಮ ಭವಿಷ್ಯ, ಬೆಂಗಳೂರು ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದಿದ್ದಾರೆ. ಇದನ್ನೂ ಓದಿ: ಭೂಮಿಗೆ ವಾಪಸ್ ಆದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿ ಸ್ವಾಗತ
ಇದೇ ವೇಳೆ, 2028ರ ಚುನಾವಣಾ ಭವಿಷ್ಯವು ಗ್ಯಾರಂಟಿ ಸಮಿತಿಗಳ ಕೈಯಲ್ಲಿದೆ ಎಂದು ಅವರು ಹೇಳಿದ್ದಾರೆ.