ಹೈದ್ರಾಬಾದ್‌ನಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢ ಸಾವು

Public TV
1 Min Read

– ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು

ಕಲಬುರಗಿ: ಹೈದರಾಬಾದ್‌ನ (Hyderabad) ಮಿಯಾಪುರದಲ್ಲಿ ಗುರುವಾರ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಮೃತರನ್ನು ನರಸಿಂಹ (60), ಪತ್ನಿ ವೆಂಕಟಮ್ಮ (55), ಮಗ ಅನಿಲ್ (32), ಮಗಳು ಕವಿತಾ (24) ಹಾಗೂ ಮೊಮ್ಮಗ ಅಪ್ಪು (2) ಎಂದು ಗುರುತಿಸಲಾಗಿದೆ. ಇದೀಗ ಐವರ ಮೃತದೇಹಗಳನ್ನು ಸ್ವಗ್ರಾಮ ಸೇಡಂ (Sedam) ತಾಲೂಕಿನ ರಂಜೋಳಕ್ಕೆ ಕರೆತರಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಮಾಜಿ ಸಚಿವರ ಮನೆಯಲ್ಲಿ 7 ಲಕ್ಷ ನಗದು, ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

ಹೈದರಾಬಾದಿನ ಮನೆಯಲ್ಲಿಯೇ ನಿಗೂಢವಾಗಿ ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ವೀರೇಂದ್ರ ಪಪ್ಪಿಯಿಂದ ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ಸೈಟ್‌ – 30 ಕಡೆ ಇಡಿ ರೇಡ್‌

ಇನ್ನು ಗ್ರಾಮಸ್ಥರೆಲ್ಲ ಸೇರಿ ಹಣ ಸಂಗ್ರಹಿಸಿ, ಮೃತದೇಹಗಳನ್ನು ಗ್ರಾಮಕ್ಕೆ ತೆಗೆದುಕೊಂಡು ಬಂದಿದ್ದು, ಅಂತ್ಯಸಂಸ್ಕಾರಕ್ಕೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share This Article