ಹಾಸನ/ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದ (Heart Attack) ಸರಣಿ ಸಾವಿನ ಪ್ರಮಾಣ ಮುಂದುವರಿದಿದೆ. ಹಿರಿಯ ಜೀವಗಳು, ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ.
ಇಂದು (ಜು.6) ಸಹ ಕೂಡ ಹಾಸನದಲ್ಲಿ (Hassan) ಇಬ್ಬರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರು, ಯಾದಗಿರಿಯಲ್ಲಿ ಒಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಓಲೈಕೆಗಾಗಿ ಸಂವಿಧಾನಕ್ಕೆ 370ನೇ ವಿಧಿ ಸೇರಿಸಿದ್ದೇ ನೆಹರೂ: ಛಲವಾದಿ ಕಿಡಿ
ಈ ನಡುವೆ ಹಾಸನ ಜಿಲ್ಲೆಯಲ್ಲಿ ಸರಣಿ ಸಾವು ಸಂಭವಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ (KN Rajanna) ತಲೆ ಹಾಕಿರಲಿಲ್ಲ. ಇವತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೃದಯಾಘಾತಕ್ಕೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯಕ್ಕೆ ಸೂಚನೆ ಕೊಟ್ಟಿದ್ದಾರೆ. ಪ್ರತಿಯೊಂದು ಕೇಸ್‌ಗೂ ಹಿಸ್ಟರಿ ಬರೆಯಬೇಕು ಅಂತ ಸೂಚನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ, ಗೇಟ್ ಪಾಸ್ ನೀಡೋದು ಪಕ್ಕಾ: ಆರ್. ಅಶೋಕ್ ಭವಿಷ್ಯ
ಅಷ್ಟೇ ಅಲ್ಲ ಶಾಲೆಗಳಲ್ಲೂ ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಡಿಎಚ್‌ಒ ಅನಿಲ್ ಕುಮಾರ್ ಹೃದಯಾಘಾತಗಳ ಬಗ್ಗೆ ಅಂಕಿ ಅಂಶ ಕೊಟ್ಟಿದ್ದಾರೆ. ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದಿದ್ದ ಸಿಎಂ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ: ವಿಜಯೇಂದ್ರ