ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು

Public TV
0 Min Read

ಬಳ್ಳಾರಿ: ಐದು ವರ್ಷದ ಬಾಲಕಿಯ ಮೇಲೆ ದುಷ್ಕರ್ಮಿಯೊಬ್ಬ ಅತ್ಯಾಚಾರ ಎಸಗಿದ ಪ್ರಕರಣ ತೋರಣಗಲ್‍ನಲ್ಲಿ (Toranagallu) ನಡೆದಿದೆ.

ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ದುಷ್ಕರ್ಮಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗುವಿಗೆ ಆಂತರಿಕ ಗಾಯವಾಗಿ, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಮಗುವಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗಿದೆ.

ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಪ್ರಾಣಾಪಾಯದಿಂದ ಮಗು ಪಾರಾಗಿದೆ. ಪರೀಕ್ಷೆ ವೇಳೆ ಮಗುವಿನ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಈ ಸಂಬಂಧ ತೋರಣಗಲ್ ಪೊಲೀಸ್ (Police) ಠಾಣೆಯಲ್ಲಿ ಪೋಕ್ಸೋ ಪ್ರಕರಣ (POCSO Case) ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Share This Article