ಮುಂದುವರೆದ ಮಳೆಯಾರ್ಭಟ – ಭೀಮಾ, ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ

Public TV
2 Min Read

-ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ

ಯಾದಗಿರಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ (Rain) ಕೃಷ್ಣಾ (Krishna River) ಹಾಗೂ ಭೀಮಾ ನದಿ  (Bhima River) ಮೈದುಂಬಿ ಹರಿಯುತ್ತಿವೆ. ಇದರಿಂದ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಪ್ರವಾಹದ  (Flood) ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದ್ದು, ನದಿಯ ಪಾತ್ರದ ಕಡೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಯಾದಗಿರಿ, ಗುರುಮಠಕಲ್, ಶಹಾಪುರ ಹಾಗೂ ವಡಗೇರಾ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಗುರುಸಣಿಗಿ ಬ್ರಿಜ್ ಕಂ ಬ್ಯಾರೇಜ್ ನಿಂದ ಭೀಮಾ ನದಿಗೆ 50,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ನದಿ ಪಾತ್ರದ ವೀರಾಂಜನೇಯ ಹಾಗೂ ಕಂಗಳೇಶ್ವರ ದೇವಸ್ಥಾನಗಳು ಸಂಪೂರ್ಣ ಮುಳುಗಡೆಯಾಗಿವೆ. ಇನ್ನೊಂದೆಡೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿಗೂ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಡೆಡ್ ಸ್ಟೋರೇಜ್ ದಾಟಿ ಹೋಗಿದ್ದ ನಾರಾಯಣಪುರದ ಬಸವಸಾಗರ ಜಲಾಶಯ ಚುರುಕುಗೊಂಡ ಮಳೆಯಿಂದಾಗಿ ಈಗ 50% ರಷ್ಟು ಭರ್ತಿಯಾಗಿದೆ. ಇದರಿಂದಾಗಿ ಜಲಾಶಯದಿಂದ 20,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಎರಡೂ ನದಿ ತೀರಕ್ಕೆ ಜನರು ಹೋಗದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಒಂದು ವಾರದಲ್ಲಿ KRS ಡ್ಯಾಂ 17 ಅಡಿ ಭರ್ತಿ – ನೀರಿನ ಮಟ್ಟ 108 ಅಡಿಗೆ ಹೆಚ್ಚಳ

ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಸುರಿದ ಮಳೆಯ ಆರ್ಭಟಕ್ಕೆ ಜಿಲ್ಲೆಯಲ್ಲಿ 160 ಮನೆಗಳು ಕುಸಿದು ಬಿದ್ದಿವೆ. ಸುರಪುರ, ಶಹಾಪುರ, ವಡಗೇರಾ, ಗುರುಮಠಕಲ್ ಸೇರಿದಂತೆ ಮೊದಲಾದ ಭಾಗಗಳಲ್ಲಿ ಮನೆಗಳು ಬಿದ್ದಿವೆ. ಹಲವರು ಇದರಿಂದ ತೊಂದರೆಗೆ ಸಿಲುಕಿದ್ದು ಸರ್ಕಾರ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಕೆಲವು ಶಾಲೆಗಳು ಶಿಥಿಲಗೊಂಡು ಮಳೆ ಬಂದರೆ ಸೋರುತ್ತಿವೆ. ಅಲ್ಲದೇ ಕುಸಿಯುವ ಭೀತಿಯನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ – ಒಂದು ವಾರದಲ್ಲಿ 70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್