ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ – ಬಸವಸಾಗರ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

Public TV
1 Min Read

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಡ್ಯಾಂ (Basava Sagara Dam) ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಕೃಷ್ಣಾ ನದಿ (Krishna River) ತೀರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.

ಡ್ಯಾಂನ 25 ಗೇಟ್ ಓಪನ್ ಮಾಡಿ ಕೃಷ್ಣಾ ನದಿಗೆ 1,20,800 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ 1,10,000 ಕ್ಯುಸೆಕ್ ನೀರು ಒಳಹರಿವಿದೆ. 33.33 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 30.83 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಳ ಹಿನ್ನಲೆ ನೀರು ಬಿಡುಗಡೆ ಪ್ರಮಾಣ ಏರಿಕೆಯಾಗಿದೆ.  ಇದನ್ನೂ ಓದಿ: ಕಿಲ್ಲಿಂಗ್ ಸ್ಟಾರ್ ಬಿಂದಾಸ್ ಲೈಫ್- ಜೈಲು ನಿಯಮ ಏನು ಹೇಳುತ್ತೆ?

ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದರೂ ಡ್ಯಾಂ ಮುಂಭಾಗದಲ್ಲಿಯೇ ಮೀನುಗಾರರು ಹುಚ್ಚಾಟ ನಡೆಸಿದ್ದಾರೆ. ಉಕ್ಕಿ ಹರಿಯುವ ನದಿಯಲ್ಲಿಯೇ ಮೀನು ಹಿಡಿಯುತ್ತಿದ್ದು, ಅಪಾಯವನ್ನು ಲೆಕ್ಕಿಸದೇ ಡೋಂಟ್ ಕೇರ್ ಎಂದು ಮೀನು ಹಿಡಿಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಇದನ್ನೂ ಓದಿ: ಇಂದು ಮಂಡ್ಯದಲ್ಲಿ ಹೆಚ್‌ಡಿಕೆ ಮೊದಲ ದಿಶಾ ಸಭೆ

Share This Article