ಉತ್ತರ ಭಾರತದ ಹಲವು ರಾಜ್ಯಗಳಿಗೆ ಪ್ರವಾಹ ಎಚ್ಚರಿಕೆ – ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್

Public TV
1 Min Read

ನವದೆಹಲಿ: ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

ಮುಂದಿನ 2-3 ದಿನಗಳ ಕಾಲ ಮಧ್ಯಪ್ರದೇಶ (Madhya Pradesh) ಹಾಗೂ ದೆಹಲಿಯಲ್ಲಿ (Delhi) ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣವಿರಲಿದೆ. ಮಾನ್ಸೂನ್ ಮಾರುತಗಳು ಸಕ್ರಿಯವಾಗಿರಲಿದ್ದು, ದೇಶದ ಮಧ್ಯ ಭಾಗದಲ್ಲಿ ಮಳೆಯ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.ಇದನ್ನೂ ಓದಿ: CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ

ಪೂರ್ವ ಮಧ್ಯಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರಾಖಂಡ, ತ್ರಿಪುರ, ಮಿಜೋರಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೆಡೆ ಬುಧವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜು.13ರವರೆಗೆ ಮಳೆ ಮುಂದುವರಿಯಲಿದೆ ಎಂದು ವರದಿ ಮಾಡಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದೆಹಲಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ನಿಂದ 37 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್:
ಹಿಮಾಚಲ ಪ್ರದೇಶದ ಆರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಂಗಳವಾರದಿಂದ ಮುಂದಿನ ಸೋಮವಾರದವರೆಗೆ (ಜು.14) ಮುನ್ಸೂಚನೆ ನೀಡಿದೆ.

ಇನ್ನೂ ಜು.9ರಿಂದ 14ರವರೆಗೆ ಅಸ್ಸಾಂ, ಮೇಘಾಲಯ, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜು.11ರಿಂದ 14ರವರೆಗೆ ಅರುಣಾಚಲ ಪ್ರದೇಶ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಛತ್ತೀಸ್‌ಗಢದ ವಿದರ್ಭ, ಪಶ್ಚಿಮ ಬಂಗಾಳ, ಜಾರ್ಖಂಡ್‌ನಲ್ಲಿ ಮಳೆ ಮುಂದುವರೆಯಲಿದೆ.

ಉತ್ತರಾಖಂಡದ ಉತ್ತರಕಾಶಿ, ತೆಹ್ರಿ, ಬಾಗೇಶ್ವರ, ಡೆಹರಾಡೂನ್, ರುದ್ರಪ್ರಯಾಗ ಮತ್ತು ನೈನಿತಾಲ್ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿರಲಿದೆ.ಇದನ್ನೂ ಓದಿ: ರಂಭಾಪುರಿ ಶ್ರೀಗಳಿಗೂ ಕಾಂಗ್ರೆಸ್ ಪಕ್ಷಕ್ಕೂ ಏನ್ ಸಂಬಂಧ? – ಸತೀಶ್ ಜಾರಕಿಹೊಳಿ ಟಾಂಗ್

Share This Article