ಕಲಬುರಗಿ: ಉತ್ತರಾಖಂಡದಲ್ಲಿ (Uttarakhand) ಉಂಟಾದ ಪ್ರವಾಹದಿಂದ ಇದೀಗ ಅಲ್ಲಿಗೆ ತೆರಳಿದ ಕನ್ನಡಿಗರು ಸಹ ಸಂಕಷ್ಟಕ್ಕೆ ಸಿಲುಕಿರುವ ಸಾಧ್ಯತೆ ಹಿನ್ನೆಲೆ ಅವರ ಸಹಾಯಕ್ಕಾಗಿ ಕಲಬುರಗಿ (Kalaburagi) ಜಿಲ್ಲಾಡಳಿತ ಸಹಾಯವಾಣಿ ಕೇಂದ್ರ (Helpline) ಆರಂಭಿಸಿದೆ.
ಕಲಬುರಗಿ ಜಿಲ್ಲೆಯಿಂದ ಉತ್ತರಾಖಂಡದ ಉತ್ತರಕಾಶಿಗೆ (Uttarkashi) ಪ್ರವಾಸಕ್ಕೆ ತೆರಳಿ ಮೇಲ್ಕಂಡ ಘಟನೆಯಲ್ಲಿ ಸಿಲುಕಿಕೊಂಡಿದಲ್ಲಿ, ಅಂಥವರ ಮಾಹಿತಿಯನ್ನು ಸಂಬಂಧಿಸಿದವರು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08472-278677 ಹಾಗೂ ಪೊಲೀಸ್ ಕಂಟ್ರೋಲ್ ಸಂಖ್ಯೆ 9480805500, 9480803500, 08472-263604, 228112ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ
ಈ ಸಹಾಯವಾಣಿ ಮೂಲಕ ನೊಂದಣಿ ಮಾಡಿಕೊಂಡ ಬಳಿಕ ಪ್ರಯಾಣಿಕರ ಸಂಪೂರ್ಣ ಮಾಹಿತಿ ಪಡೆದು, ಬಳಿಕ ಅಲ್ಲಿನ ಅಧಿಕಾರಿಗಳ ಜೊತೆ ಚರ್ಚಿಸಿ ಸಂಕಷ್ಟದಲ್ಲಿರುವವರ ನೆರವಿಗಾಗಿ ಜಿಲ್ಲಾಡಳಿತ ಮುಂದಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ 46,933 ಕೋಟಿ ತೆರಿಗೆ ಹಣ ಬಿಡುಗಡೆ – ಕೇಂದ್ರ ಹಣಕಾಸು ಸಚಿವಾಲಯ