ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ 90 ಲಕ್ಷ ಭಾರತೀಯರ ಸುರಕ್ಷತೆಗೆ ಆದ್ಯತೆ: ಸಂಪುಟ ಸಭೆಯಲ್ಲಿ ಚರ್ಚೆ

1 Min Read

ನವದೆಹಲಿ: ಮಧ್ಯಪ್ರಾಚ್ಯದಲ್ಲಿ (Middle East) ವಾಸಿಸುವ ಮತ್ತು ಕೆಲಸ ಮಾಡುತ್ತಿರುವ ಸುಮಾರು 90 ಲಕ್ಷ ಭಾರತೀಯ (Indians) ವಲಸಿಗರ ಸುರಕ್ಷತೆ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ನಿನ್ನೆ ಸಂಜೆ ಭದ್ರತೆ ಕುರಿತ ಸಂಪುಟ ಸಮಿತಿಯ ತುರ್ತು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದನ್ನೂ ಓದಿ: ವಿಶ್ವದ ಅತಿ ದೊಡ್ಡ ತೈಲ ಕಂಪನಿ ಸೌದಿ ಅರಾಮ್ಕೊದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

ಅಮೆರಿಕ ಮತ್ತು ಇಸ್ರೇಲ್, ಇರಾನ್ ವಿರುದ್ಧ ಸಂಘಟಿತ ವೈಮಾನಿಕ ದಾಳಿಗಳನ್ನು ಪ್ರಾರಂಭಿಸಿದ ನಂತರ ಕತಾರ್ ಮತ್ತು ದುಬೈ ಸೇರಿದಂತೆ ಕೊಲ್ಲಿಯಲ್ಲಿನ ಅಮೆರಿಕದ ಮಿತ್ರರಾಷ್ಟ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಟೆಹ್ರಾನ್ ಪ್ರತಿದಾಳಿ ನಡೆಸುತ್ತಿದೆ.

ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಬಗ್ಗೆ ಸಮಿತಿಯು ಗಂಭೀರ ಕಳವಳ ವ್ಯಕ್ತಪಡಿಸಿದೆ. 11 ದೇಶಗಳಲ್ಲಿ ವಾಯುಪ್ರದೇಶ ಮುಚ್ಚಿದ್ದರಿಂದ ನಿನ್ನೆ ಭಾರತೀಯ 350 ಅಂತರರಾಷ್ಟ್ರೀಯ ವಿಮಾನಗಳ ರದ್ದತಿಯಿಂದ ಸಮಸ್ಯೆ ಎದುರಾಗಿದೆ. ನಿರ್ಣಾಯಕ ಪರೀಕ್ಷೆಗಳಿಗೆ ಹಾಜರಾಗಲು ನಿಗದಿಯಾಗಿದ್ದ ಭಾರತೀಯ ವಿದ್ಯಾರ್ಥಿಗಳ ಬಗ್ಗೆಯೂ ಕಳವಳ ವ್ಯಕ್ತಪಡಿಸಲಾಯಿತು. ಭಾರತದ ಇಂಧನ ಭದ್ರತೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಪ್ರಮುಖವಾದ ಕಡಲ ವ್ಯಾಪಾರ ಮಾರ್ಗಗಳ, ನಿರ್ದಿಷ್ಟವಾಗಿ ಹಾರ್ಮುಜ್ ಜಲಸಂಧಿಯ ಸಂಭಾವ್ಯ ಅಡ್ಡಿಗಳನ್ನು ಸಮಿತಿಯು ನಿರ್ಣಯಿಸಿತು. ಇದನ್ನೂ ಓದಿ: ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

ಪ್ರಕ್ಷುಬ್ಧತೆಯಿಂದ ತೊಂದರೆಗೊಳಗಾದ ಭಾರತೀಯ ಪ್ರಜೆಗಳಿಗೆ ಸಹಾಯ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯು ಪ್ರಮುಖ ಸರ್ಕಾರಿ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ವಿದೇಶಾಂಗ ಸಚಿವಾಲಯವು ಈಗಾಗಲೇ ಟೆಹ್ರಾನ್, ಟೆಲ್ ಅವೀವ್, ಅಬುಧಾಬಿ ಮತ್ತು ದುಬೈನಲ್ಲಿರುವ ಕಾರ್ಯಾಚರಣೆಗಳಲ್ಲಿ 24/7 ಸಹಾಯವಾಣಿಗಳನ್ನು ಸಕ್ರಿಯಗೊಳಿಸಿದೆ.

Share This Article