ನಿರಂತರ ಭ್ರೂಣ ಹತ್ಯೆ – ಐವರು ವೈದ್ಯರು ಸೇರಿ 9 ಮಂದಿ ಅರೆಸ್ಟ್

Public TV
1 Min Read

ಬೆಂಗಳೂರು: ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ (Foeticide) ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು (Bengaluru Baiyappanahalli Police) ಬಂಧಿಸಿದ್ದಾರೆ.

ಐವರು ವೈದ್ಯರು (Doctors) ಸೇರಿ, 9 ಜನರನ್ನು ಬಂಧಿಸಲಾಗಿದೆ. ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್, ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ ಬಂಧಿತ ಆರೋಪಿಗಳು.

ಮೊದಲು ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬವರನ್ನ ಬಂಧಿಸಲಾಗಿತ್ತು. ಅವರನ್ನ ವಿಚಾರಣೆಗೆ ಒಳಪಡಿಸಿದ ನಂತರ ಈ ಪ್ರಕರಣದ ಹಿಂದಿರುವ ವೈದ್ಯರ ಹೆಸರು ಕೇಳಿಬಂದಿತು. ಇದನ್ನೂ ಓದಿ: Kambala: ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳದ ರಂಗು – ಸಾರ್ವಜನಿಕರಿಗೆ ಪ್ರವೇಶ ಉಚಿತ

ಬಳಿಕ ತನಿಖೆ (Investigation) ಮುಂದುವರಿಸಿದ ಪೊಲೀಸರು ಕೃತ್ಯದ ಹಿಂದಿದ್ದ ಚನ್ನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ, ಡಾ.ಚಂದನ್ ಬಲ್ಲಾಳ್ ಮತ್ತು ಪತ್ನಿ ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್ ಎಂಬವರನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಒಟ್ಟು 9 ಮಂದಿ ಸೇರಿ ಮಾಡಿಕೊಂಡು ವ್ಯವಸ್ಥಿತವಾಗಿ ಕೃತ್ಯ ಎಸಗುತ್ತಿದ್ದರು. ಪ್ರತಿ ತಿಂಗಳು 20 ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದರು. ಮೈಸೂರಿನ ಉದಯಗಿರಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಗುಡ್‌ನ್ಯೂಸ್ – ಚುನಾವಣೆಗೂ ಮುನ್ನ ಸಲ್ಲಿಸಿದ ಅರ್ಜಿಗಳ ವಿಲೇವಾರಿ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಅಮರ್‌ ರಹೇ ಕ್ಯಾಪ್ಟನ್‌ ಪ್ರಾಂಜಲ್‌ – ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಜನ ಆಗಮನ

Share This Article