ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ್ದಾರೆ : ಸಾರಿಗೆ ಇಲಾಖೆಯಿಂದ ಸ್ಪಷ್ಟನೆ

Public TV
2 Min Read

ಬೆಂಗಳೂರು: ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ (Bus) ಚಾಲನೆ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿರುವ (Hubballi) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.

ಮಳೆ ಬರುತ್ತಿರುವಾಗ ಚಾಲಕರು (Driver) ಕೊಡೆ ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡಿದ ಬೆನ್ನಲ್ಲೇ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.  ಅಷ್ಟೇ ಅಲ್ಲದೇ  ಬಸ್ಸಿನಲ್ಲಿ ಛತ್ರಿ ಹಿಡಿದು ರೀಲ್ಸ್ ಮಾಡಿದ ಚಾಲಕ ಮತ್ತು ನಿರ್ವಾಹಕಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದೆ.

 ಇದನ್ನೂ ಓದಿ: ಹಿಂದೆ ಉದ್ಯಮ ಬೆಳೆದಾಗ ನಿರ್ದಿಷ್ಟ ವ್ಯಕ್ತಿಗೆ ಮಾರುವಂತೆ ಒತ್ತಡ ಇತ್ತು, ಈಗ ಯಾರೂ ಒತ್ತಡ ಹೇರಲ್ಲ : ಏರ್‌ಸೆಲ್‌ ಸಂಸ್ಥಾಪಕ 

ಸ್ಪಷ್ಟನೆಯಲ್ಲಿ ಏನಿದೆ?
ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ಚಾಲಕರಾಗಿ ಹನುಮಂತಪ್ಪ ಅ ಕಿಲ್ಲೇದಾರ ಹಾಗೂ ನಿರ್ವಾಹಕರಾಗಿ ಅನಿತಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದಾಗ ಸಂಜೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ್ದಾರೆ. ಚಾಲನೆ ಮಾಡುತ್ತಿರುವ ದೃಶ್ಯವನ್ನು ನಿರ್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.

ಮಳೆ ಬರುತ್ತಿದ್ದಾಗ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಿಂದ ಸೋರುತ್ತಿರಲಿಲ್ಲ.ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲಾಗಿಲ್ಲ. ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿದ್ದು ಮೇಲ್ಚಾವಣಿ ಸೋರುತ್ತಿಲ್ಲ ಎನ್ನುವುದನ್ನು ಖಚಿತಪಡಿಸಲಾಗಿದೆ.

ಈ ವಿಡಿಯೋದ ಬಗ್ಗೆ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆಯಲಾಗಿದ್ದು ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

 

Share This Article