ಬಲವಂತವಾಗಿ ಮತಾಂತರಕ್ಕೆ ಯತ್ನ – 11 ಮಂದಿಯ ವಿರುದ್ಧ ಎಫ್‍ಐಆರ್

Public TV
1 Min Read

ಹುಬ್ಬಳ್ಳಿ: ಮುಸ್ಲಿಂ (Muslim) ಧರ್ಮಕ್ಕೆ ಬಲವಂತವಾಗಿ ಮತಾಂತರ (Conversion) ಕ್ಕೆ ಯತ್ನಿಸಿದ 11 ಮಂದಿ ವಿರುದ್ಧ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ್ ಎಂಬವರಿಗೆ ಮತಾಂತರಕ್ಕೆ ಯತ್ನಿಸಿದ್ದು, ಅತ್ತಾವರ ಮೂಲದ 11 ಮಂದಿ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ಇದನ್ನೂ ಓದಿ: ಗಾಂಜಾ ದಂಧೆಕೋರರಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ – ICUನಲ್ಲಿ ಸಿಪಿಐ

MOSQUE

ಕಳೆದ ಮೇ ತಿಂಗಳಿನಲ್ಲಿ ಶ್ರೀಧರ್ ಅವರನ್ನು ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಬನಶಂಕರಿ (Banashankari) ಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರೆಂದು ಆರೋಪ ಮಾಡಲಾಗಿದೆ. ಅಲ್ಲದೇ ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಮತಾಂತರದ ಬಗ್ಗೆ ಬಾಂಡ್ ಪೇಪರ್ ನಲ್ಲಿ ಸಹಿ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ.

ಮುಸ್ಲಿಂ ಧರ್ಮದ ಪ್ರಾರ್ಥನೆ ಹಾಗೂ ಇತರ ಪದ್ಧತಿಗಳ ಕುರಿತು ತರಬೇತಿ ನೀಡಿ ಬ್ಯಾಂಕ್ ಖಾತೆಗೆ 35 ಸಾವಿರ ವರ್ಗಾಯಿಸಿ, ತಾವು ಹೇಳಿದಂತೆ ಕೇಳಬೇಕು ಎಂದು ಜೀವ ಬೆದರಿಕೆ (Threat) ಹಾಕಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿ (Hubballi) ಯಲ್ಲಿ ಅಪರಿಚಿತರಿಂದ ಶ್ರೀಧರ್ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದ್ದು, ಸದ್ಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ (Navanagar Police Station) ಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *