ಬಣ್ಣದ ಲೋಕಕ್ಕೆ ಕಾಲಿಟ್ಟ ಬಿ.ಎಸ್ ಯಡಿಯೂರಪ್ಪ

Public TV
0 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿನಿಮಾ ಲೋಕಕ್ಕೆ ಕಾಲಿಟ್ಟಿದ್ದಾರೆ.

ತನುಜಾ ಎಂಬ ಚಿತ್ರದಲ್ಲಿ ಮೊಟ್ಟಮೊದಲ ಬಾರಿಗೆ ಬಣ್ಣಹಚ್ಚಿ ಸ್ಯಾಂಡಲ್‍ವುಡ್‍ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಮುಖ್ಯಮಂತ್ರಿಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಜೊತೆಗೆ ಪತ್ರಕರ್ತ ವಿಶ್ವೇಶ್ವರ್ ಭಟ್ ಕೂಡ ಕಾಣಿಸಿಕೊಂಡಿದ್ದಾರೆ. ಹರೀಶ್ ಎಂಡಿ ಹಳ್ಳಿ ನಿರ್ದೇಶನವಿದೆ. ಚಿತ್ರ ನೈಜ ಘಟನೆಯಾಧಾರಿತವಾಗಿದೆ. ಶಿವಮೊಗ್ಗ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ. ಇದನ್ನೂ ಓದಿ: ರಾಜಕೀಯಕ್ಕೆ ಬರ್ತಾರಾ ನಿರ್ದೇಶಕ ಪ್ರೇಮ್..?

Share This Article
Leave a Comment

Leave a Reply

Your email address will not be published. Required fields are marked *