ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

0 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಅವರ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಎಂಬವರ ಮಗ ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: 3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ – ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ FIR

ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೊಟ್ಟೆಗೊಲ್ಲಹಳ್ಳಿಯ ಮನೆಯಲ್ಲಿ ನಿನ್ನೆ ರಾತ್ರಿ ಘಟನೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಎಂಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

Share This Article