ಹೆಸ್ಕಾಂಗೆ 13 ಸಾವಿರ ಕೋಟಿ ಅನುದಾನ ನೀಡಿ ಪುನಶ್ಚೇತನ ನೀಡಿದ್ದೆ: ಬೊಮ್ಮಾಯಿ

Public TV
1 Min Read

ಬೆಳಗಾವಿ: ಕಾಂಗ್ರೆಸ್ (Congress) ಕಾಲದ ದೊಡ್ಡ ಪ್ರಮಾಣದ ಹೊರೆ ಹೆಸ್ಕಾಂ (HESCOM) ಮೇಲಿತ್ತು. ನಾನು ಸಿಎಂ ಆಗಿದ್ದಾಗ ದೊಡ್ಡ ಪ್ರಮಾಣದ ಅನುದಾನವನ್ನು (Grant) ನೀಡಿದ್ದೇನೆ ಎಂದು‌ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ದೊಡ್ಡ ಪ್ರಮಾಣದ ಹೊರೆಯನ್ನು ಹೆಸ್ಕಾಂ ಮೇಲೆ ಹಾಕಿತ್ತು. 13 ಸಾವಿರ ಕೋಟಿ ರೂಪಾಯಿ ನೀಡಿ ಹೆಸ್ಕಾಂಗೆ ಪುನಶ್ಚೇತನ ನೀಡಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಇದು ಗೊತ್ತಿಲ್ಲ. ವಿದ್ಯುಚ್ಛಕ್ತಿ ಕ್ಷೇತ್ರ ಆರ್ಥಿಕವಾಗಿ ಸಂಕಷ್ಟದಲ್ಲಿದೆ ಎಂದರು.

 

ಒಟ್ಟು ಬಿಲ್‌ನಲ್ಲಿ 50% ಬಿಲ್ ಸರ್ಕಾರದಿಂದ ಬರುತ್ತದೆ. ಹೆಸ್ಕಾಂ ಅಧಿಕಾರಿಗಳಿಗೆ ಬಿಲ್ ವಸೂಲಿ ಮಾಡಲು ಆರ್ಥಿಕ ಇಲಾಖೆಯಲ್ಲಿ ಕುರ್ಚಿ ಹಾಕಿ ಕೊಡಬೇಕಾಗುತ್ತದೆ. ಹಳೆ ಬಾಕಿ ಅಂತಾ ಪುಕ್ಕಟೆ ಹೊರೆಯನ್ನು ಜನರ ಮೇಲೆ ಹಾಕಿದ್ದಾರೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದ್ದಾರೆ. ಇದು ಜನರಿಗೆ ಮಾಡಿರುವ ಒಂದು ದೋಖಾ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಹಿರಿಯ ವೈದ್ಯರ ಕಿರುಕುಳವೇ ಕಾರಣ: ಸಂಬಂಧಿಕರ ಆಕ್ರೋಶ

 

ಜನರನ್ನು ಸಂಕಷ್ಟಕ್ಕೆ ಸಿಲುಕಿಸುವುದನ್ನ ಮಾಡುತ್ತಿದ್ದಾರೆ. ಎಷ್ಟು ವಿದ್ಯುತ್ ಬಳಕೆ ಮಾಡಬೇಕು ಎನ್ನುವ ಅಧಿಕಾರ ಪ್ರತಿ ಪ್ರಜೆಗೂ ಇದೆ. ಇವರು ಸರಾಸರಿ ಲೆಕ್ಕದಲ್ಲಿ ಅವರು ಬಳಸುವ ವಿದ್ಯುತ್ ಮೇಲೂ ಸಹ ಹಿಡಿದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

Share This Article