ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ: ಬಿಎಸ್‍ವೈ

Public TV
1 Min Read

ಶಿವಮೊಗ್ಗ: ಬಿ.ವೈ ವಿಜಯೇಂದ್ರ  (BY Vijayendra) ಅವರು ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯದ ಉದ್ದಗಲಕ್ಕೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅಲ್ಲದೆ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ತುಳುಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (bS Yediyurappa) ಹೇಳಿದ್ದಾರೆ.

ಬಿ.ವೈ.ವಿಜಯೇಂದ್ರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಅಧಿಕಾರಕ್ಕೆ ಇರಲು ಹಕ್ಕಿಲ್ಲ ರಾಜೀನಾಮೆ ಕೊಟ್ಟು ಹೋಗಿ ಅಂತಿದ್ದಾರೆ ಎಂದರು.

ಇವತ್ತು ಚುನಾವಣೆ ನಡೆದರೂ ರಾಜ್ಯದಲ್ಲಿ 135-136 ಬಿಜೆಪಿ (BJP) ಸೀಟು ಬರುತ್ತದೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಅಂತಹ ವಾತಾವರಣ ಸೃಷ್ಟಿಯಾಗಿದೆ. ಮಾಧ್ಯಮದಲ್ಲಿ ಬಂದ ವರದಿ ಆಧಾರದ ಮೇಲೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಈಗ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಬರೋದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಡೀ ದೇಶ ಪ್ರಾರ್ಥಿಸುತ್ತಿದ್ರೆ ಗಾಂಧಿ ಕುಟುಂಬ ಮಾತ್ರ ಡ್ಯಾನ್ಸ್ ಮಾಡ್ತಿತ್ತು: ಅಸ್ಸಾಂ ಸಿಎಂ ಕಿಡಿ

ಲೋಕಸಭೆಯಲ್ಲಿ 28 ಕ್ಕೆ 28 ಗೆಲ್ಲಬೇಕು. 28 ಕ್ಕೆ 28 ಗೆಲ್ಲುವ ಮೂಲಕ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ ಎಂದು ಬಿಎಸ್‍ವೈ ತಿಳಿಸಿದರು.

Share This Article