ಮಾಜಿ ಸಿಎಂಗೆ 70ನೇ ಹುಟ್ಟುಹಬ್ಬ- ಸಿಎಂ ಎಚ್‍ಡಿಕೆಯಿಂದ ವಿಶ್

Public TV
1 Min Read

ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 70ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಶುಭಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರೋ ಎಚ್‍ಡಿಕೆ, ಮಾಜಿ ಮುಖ್ಯಮಂತ್ರಿ, ಹಿರಿಯ ಮುಖಂಡ ಶ್ರೀ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ದೀರ್ಘ ಆಯಸ್ಸು ಹಾಗೂ ಆರೋಗ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸಮ್ಮಿಶ್ರ ಸರ್ಕಾರವನ್ನು ಮುಂದೆ ಕೊಂಡೊಯ್ಯುವಲ್ಲಿ ಅವರ ಸಲಹೆಗಳು ಅಮೂಲ್ಯವಾದದ್ದು. ರಾಜ್ಯವನ್ನು ಪ್ರಗತಿ ಹಾಗೂ ಸಮೃದ್ಧಿಯತ್ತ ಕೊಂಡೊಯ್ಯುವಲ್ಲಿ ಅವರ ಸಲಹೆಗಳು ಮುಖ್ಯ ಅಂತ ಹೇಳಿದ್ದಾರೆ.

ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ5 ವರ್ಷ ಆಡಳಿತ ಪೂರೈಸಿದ ಸಿದ್ದರಾಮಯ್ಯ ಮೈಸೂರಿನ ಅವರು ವರುಣ ಹೋಬಳಿಯ ಸಿದ್ದರಾಮನಹುಂಡಿಯಲ್ಲಿ ಆಗಸ್ಟ್ 12, 1948ರಂದು ಜನಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಯೋಜನೆಗಳನ್ನು ಜಾರಿಗೆ ತಂದಿದ್ದ ಸಿದ್ದರಾಮಯ್ಯ ಅವರು ದಲಿತವರ್ಗದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಿದ್ದರು.

2018, ಮೇ 12ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾದಾಮಿ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವಗೊಂಡರೂ ಬಾದಾಮಿ ಕ್ಷೇತ್ರದಲ್ಲಿ ಜಯಸಾಧಿಸಿ ಶಾಸಕರಾಗಿ ಆಯ್ಕೆಯಾದರು. ಪ್ರಸ್ತುತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೂ ಆಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *