ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡ್ತೀವಿ, ಎಚ್‍ಡಿಕೆಯನ್ನು ಮಾತಾಡಿಸ್ತೇನೆ- ಮಾಜಿ ಸಿಎಂ

Public TV
1 Min Read

ಬೆಂಗಳೂರು: ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡಬೇಕು. ಇನ್ನು ಏನು ಅವರು ಮಾಡುತ್ತಾರಾ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾನು ಕುಮಾರಸ್ವಾಮಿ ಜೊತೆ ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ರಾಜೀನಾಮೆ ಹೇಳಿಕೆಗೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದೇವೆ. ಅದರಲ್ಲಿ ಜೆಡಿಎಸ್ ನವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಹೀಗಾಗಿ ನಾನು ಮುಖ್ಯಮಂತ್ರಿಯಾಗಬೇಕೆಂಬ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ತಿಳಿಸಿದ್ರು.

ಇದೇ ವೇಳೆ ಹಿಂದೂ ಹುಡುಗಿಯ ಮೈ ಮುಟ್ಟಿದ ಕೈ ಇರಬಾರದು ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ರಾಜ್ಯದ ಜನ ಅವರು ಮಂತ್ರಿಯಾಗೋದಿಕೆ ಯೋಗ್ಯರಾ ಅಥವಾ ಅಯೋಗ್ಯರಾ ಎಂಬುದನ್ನು ತೀರ್ಮಾನ ಮಾಡಬೇಕು. ಒಬ್ಬ ಮಂತ್ರಿಯಾಗಿದ್ದುಕೊಂಡು ಯಾರದೋ ಕೈ ಕಡಿಯಿರಿ ಎಂದು ಹೇಳೋದು ಸರೀನಾ ಎಂದು ಪ್ರಶ್ನಿಸಿದ್ರು.

ಮುಖ್ಯಮಂತ್ರಿಗಳು ಹೇಳಿದ್ದೇನು..?
ನನ್ನ ಕೆಲಸದ ವೈಖರಿ ಯಾರಿಗಾದರೂ ಇಷ್ಟವಾಗದಿದ್ರೆ ನಾನು ರಾಜೀನಾಮೆ ಕೊಡಲು ಸಿದ್ಧನಿದ್ದೇನೆ. ಕಾಂಗ್ರೆಸ್ ಶಾಸಕರ ವರ್ತನೆ ಒಪ್ಪಲು ಸಾಧ್ಯವಿಲ್ಲ. ನಾನು ಕುರ್ಚಿಗೆ ಅಂಟಿಕೊಂಡು ಕೂರುವ ಮನುಷ್ಯ ಅಲ್ಲ. ನನಗೆ ಅದು ಇಷ್ಟವೂ ಇಲ್ಲ. ಒಳ್ಳೆಯ ಆಡಳಿತ ನೀಡೋದಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಮಾಡಿರುವುದು. ನಾನು ಡಿಸಿಎಂ, ಹಾಗೂ ಕೆಲ ಸಚಿವರು ಉತ್ತಮ ಕೆಲಸ ಮಾಡುತ್ತಿದ್ದೇವೆ. ನಾವು ಒಳ್ಳೆಯ ಆಡಳಿತ ನೀಡುತ್ತಿದ್ದೇವೆ, ನಾವು ಜತೆಗೇ ಕೆಲಸ ಮಾಡುತ್ತಿದ್ದೇವೆ. ನಮ್ಮ ಹಾಗೂ ಡಿಸಿಎಂ ನಡುವೆ ಒಳ್ಳೆಯ ಸಂಬಂಧವಿದೆ. ಜೊತೆಗೆ ಎಲ್ಲಾ ಶಾಸಕರ ಸಹಕಾರ ಬೇಕಾಗಿದೆ ಎಂದು ಹೇಳಿದ್ದಾರೆ.

https://www.youtube.com/watch?v=OKtezRt3nd4

https://www.youtube.com/watch?v=uf_fttxDbE4

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *