ಕೇಂದ್ರ ಕೊಡುವ ಅಕ್ಕಿಯಲ್ಲೂ ಕಡಿತ; ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ – ಬೊಮ್ಮಾಯಿ

By
1 Min Read

ಬೆಂಗಳೂರು: ಕೇಂದ್ರ ಸರ್ಕಾರ ಕೊಡುವ ಅಕ್ಕಿಯಲ್ಲೂ ಕಾಂಗ್ರೆಸ್ (Congress) ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ (Basavaraj Bommai ) ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ (Anna Baghya) ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ದೋಖಾ ಮಾಡಿದೆ. ಇದು ಅನ್ನಭಾಗ್ಯ ಯೋಜನೆಯಲ್ಲ, ಕನ್ನ ಭಾಗ್ಯ ಎಂದು ವ್ಯಂಗ್ಯ ಮಾಡಿದ್ದಾರೆ. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಲಾರಿ ಕಳ್ಳತನ – ಆರೋಪಿ ಅರೆಸ್ಟ್

ಮಾಜಿ ಸಿಎಂ ಕುಮಾರಸ್ವಾಮಿಯವರು ವರ್ಗಾವಣೆ ವಿಚಾರವಾಗಿ ರೇಟ್ ಫಿಕ್ಸ್ ದಾಖಲೆ ಕೊಟ್ಟಿದ್ದಾರೆ. ಅದಕ್ಕೂ ಮುಂಚೆಯೇ ನಾನು ಈ ವಿಚಾರ ಪ್ರಸ್ತಾಪಿಸಿದ್ದೆ. ಎಲ್.ಹೆಚ್, ವಿಧಾನಸೌಧ, ಕೆಕೆ ಗೆಸ್ಟ್ ಹೌಸ್‍ನಲ್ಲಿ ಜನರ ದಂಡು ಸೇರುತ್ತಿದೆ ಎಂದಿದ್ದೆ. ಈಗ ಅವರು ಒಂದು ಇಲಾಖೆಯ ದರ ಪಟ್ಟಿಯನ್ನೇ ಕೊಟ್ಟಿದ್ದಾರೆ. ಈ ಬಗ್ಗೆ ಸರ್ಕಾರ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಪಟ್ಟಿಯಲ್ಲಿರುವಷ್ಟೇ ದರ ಇದೆಯೇ? ಅಥವಾ ಜಾಸ್ತಿ ಆಗಿದೆಯೇ ಎಂದು ಸರ್ಕಾರ ಹೇಳಬೇಕು. ಈಗ ಐಎಎಸ್ ಪೋಸ್ಟ್‌ಗಳಿಗೂ ದರ ಫಿಕ್ಸ್ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಹೀರೆಕೋಡಿ ಜೈನಮುನಿ ಹತ್ಯೆ ಪ್ರಕರಣ – ಸ್ವಾಮೀಜಿಯ ಡೈರಿ ರಹಸ್ಯ ಕೆದಕುತ್ತಿರುವ ಪೊಲೀಸರು

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್