ಕೇರಳದ ಮಾಜಿ ಸಿಎಂ, ಕೈ ನಾಯಕ ಉಮ್ಮನ್ ಚಾಂಡಿ ನಿಧನ

Public TV
1 Min Read

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ (Oommen Chandy) ನಿಧನ ವಿಧಿವಶರಾಗಿದ್ದಾರೆ.

79 ವರ್ಷದ ಉಮ್ಮನ್ ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ (Cancer) ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4.25ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್‍ನ (Congress) ರಾಜ್ಯಾಧ್ಯಕ್ಷರಾದರು. ಬಳಿಕ 1970 ರಲ್ಲಿ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿಯನ್ನು ಪ್ರತಿನಿಧಿಸಿ ಶಾಸಕರಾದರು. ಒಟ್ಟು 10 ಬಾರಿ ಶಾಸಕರಾಗಿದ್ದ ಉಮ್ಮನ್ ಚಾಂಡಿಯವರು ಜನಪರ ಆಡಳಿತದಿಂದ ಜನಮನ್ನಣೆ ಗಳಿಸಿದ್ದರು. 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು. ಇದನ್ನೂ ಓದಿ: ಆಸ್ಟ್ರೇಲಿಯಾದ ಬೀಚ್‌ನಲ್ಲಿ ನಿಗೂಢ ವಸ್ತು ಪತ್ತೆ – ಚಂದ್ರಯಾನ-3ರ ಬಿಡಿಭಾಗ?

ಸದ್ಯ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸುತ್ತಿದ್ದು, ಇತ್ತ ಅಗಲಿದ ಹಿರಿಯ ನಾಯಕನ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.‌

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್