ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಪಿತೃ ವಿಯೋಗ

Public TV
1 Min Read

ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (CP Yogeshwar) ಅವರ ತಂದೆ (Father) ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾಗಿದ್ದಾರೆ.

ಸಿಪಿವೈ ಅವರ ತಂದೆ ನಿವೃತ್ತ ಶಿಕ್ಷಕ ಪುಟ್ಟಮಾದೇಗೌಡ (89) ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಪುಟ್ಟಮಾದೇಗೌಡ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ

ಮೃತ ಪುಟ್ಟಮಾದೇಗೌಡ ಅವರಿಗೆ ಸಿ.ಪಿ ಯೋಗೇಶ್ವರ್ ಸೇರಿ ಇಬ್ಬರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆಯು ಸೋಮವಾರ ಸ್ವಗ್ರಾಮ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

Share This Article