ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ

Public TV
1 Min Read

ಕಾರವಾರ: ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Ananth Kumar Hegde) ಅವರಿಗೆ ಇಮೇಲ್‌ ಮೂಲಕ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದೆ.

ಈ ಸಂಬಂಧ ಶಿರಸಿ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ಮಾಜಿ ಸಂಸದ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಅರಂತೋಡು ಘನತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – 5 ಲಕ್ಷ ಅನುದಾನ ಮಂಜೂರು

ಜೂನ್ 24 ರಂದು ಇಮೇಲ್ ಮೂಲಕ ಜೀವ ಬೆದರಿಕೆ ಬಂದಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಇಂದು ದೂರು ದಾಖಲು ಮಾಡಲಾಗಿದೆ. ಈ ಹಿಂದೆಯೂ ಸಹ ಅನಂತ ಕುಮಾರ್‌ ಹೆಗಡೆಗೆ ಜೀವ ಬೇದರಿಕೆ ಬಂದಿತ್ತು.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆಹೆಚ್‌ಬಿ ಕಾಲೊನಿಯ ನಿವಾಸದಲ್ಲಿ ಸಂಸದರು ಇದ್ದಾರೆ. ಇದನ್ನೂ ಓದಿ: ಬೀದರ್ | ಸೈಟ್ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

Share This Article