– ಧರ್ಮಸ್ಥಳ ಹೆಸರು ಹಾಳಾಗೋದಕ್ಕೆ ಪೂಜಾರಿ ಬಿಡಲ್ಲ ಎಂದು ಪ್ರತಿಜ್ಞೆ
ಮಂಗಳೂರು: ಮಸೀದಿ, ಚರ್ಚ್‌ಗಳಲ್ಲಿ ಶವ ಹೂತಿಡಲಿಲ್ವಾ? ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ ಎಂದು ಮಾಜಿ ಸಂಸದ ಜನಾರ್ದನ ಪೂಜಾರಿ (Janardhana Poojary) ಪ್ರಶ್ನಿಸಿದರು.
ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ಕುರಿತು ಉಳ್ಳಾಲ ಸಮೀಪದ ತೊಕ್ಕೊಟ್ಟು ಮುದ್ದುಕೃಷ್ಣ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಹೆಸರು ಹಾಳು ಮಾಡಲಾಗುತ್ತಿದೆ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: ಧರ್ಮಸ್ಥಳದ ಧರ್ಮಾಧಿಕಾರಿಗಳು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ: ಶಿವಗಂಗಾ ಬಸವರಾಜ್
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ನಾವಿದ್ದೇವೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಜೊತೆ ಇಡೀ ಜಗತ್ತು ನಿಲ್ಲುತ್ತದೆ. ಇಡಿ ಕುದ್ರೋಳಿ ದೇವಸ್ಥಾನ ನಿಮ್ಮೊಂದಿಗಿದೆ ಹೆದರಬೇಡಿ. ಎಸ್‌ಐಟಿ ಧರ್ಮಸ್ಥಳದಲ್ಲಿ ಎಷ್ಟು ಅಗೆದರೂ ಏನು ಸಿಗೋದಿಲ್ಲ. ಮಸೀದಿಯಲ್ಲಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ? ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ ಎಂದು ಪ್ರಶ್ನೆ ಮಾಡಿದರು.
ಮನುಷ್ಯ ಸತ್ತ ಕೂಡಲೇ ಅವನನ್ನ ದೇವಸ್ಥಾನದ ವಠಾರದಲ್ಲಿ ಹೂತು ಹಾಕೋದು ಒಂದು ಪದ್ಧತಿ. ಧರ್ಮಸ್ಥಳದಂತಹ ದೇವಸ್ಥಾನವನ್ನ ನಡೆಸೋದು ಎಷ್ಟು ಕಷ್ಟ ಇದೆ ಎಂದು ನನಗೆ ಗೊತ್ತು. ವೀರೇಂದ್ರ ಹೆಗ್ಗಡೆಯವರೇ ನಿಮ್ಮ ಜೊತೆ ನಾನಿದ್ದೇನೆ. ಧರ್ಮಸ್ಥಳದ ವಠಾರವನ್ನ ಎಸ್‌ಐಟಿಯವರು ಅಗೆಯುತ್ತಿದ್ದಾರೆ. ಶವಗಳನ್ನ ಹೂತ್ತಿದ್ದಾರೆ ಎನ್ನುವ ಆರೋಪದಲ್ಲಿ ಶವಗಳನ್ನ ಹುಡುಕುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಧರ್ಮಸ್ಥಳ ಗುಂಪು ಘರ್ಷಣೆ – 6 ಆರೋಪಿಗಳು ಅರೆಸ್ಟ್
ಧರ್ಮಸ್ಥಳ ಕೇವಲ ಜೈನರಿಗೆ ಸೇರಿದ ಸ್ಥಳವಲ್ಲ. ಧರ್ಮಸ್ಥಳವನ್ನ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕುದ್ರೋಳಿ ದೇವಸ್ಥಾನದಲ್ಲಿ ಮಾತ್ರ ಭಕ್ತನಲ್ಲ, ನಾನು ಧರ್ಮಸ್ಥಳದ ಭಕ್ತ. ಎಸ್‌ಐಟಿಯವರು ಹುಡುಕಿದ್ರೂ ಏನು ಸಿಗುತ್ತಿಲ್ಲ. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ ನೀವು. ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಅದಕ್ಕೆ ಬಿಡೋದಿಲ್ಲ ಎಂದು ತಿಳಿಸಿದರು.
ಧರ್ಮಸ್ಥಳದ ಹೆಸರು ಹಾಳು ಮಾಡೋದಕ್ಕೆ ಪೂಜಾರಿ ಬಿಡೋದಿಲ್ಲ. ಪ್ರಧಾನಿ ಮೋದಿಯವರು ಇಂದು ಕರ್ನಾಟಕಕ್ಕೆ ಬಂದಿದ್ದಾರೆ. ಮೋದಿಯವರೇ ನಿಮಗೆ ಧೈರ್ಯವಿದ್ದರೆ, ತಾಕತ್ತಿದ್ದರೆ ಧರ್ಮಸ್ಥಳಕ್ಕೆ ಹೋಗಿ ಭಾಷಣ ಮಾಡಿ ಎಂದು ಟಾಂಗ್ ಕೊಟ್ಟರು.