ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಹುದ್ದೆಯಿಂದ ರಮ್ಯಾ ಕಿಕ್ ಔಟ್?

Public TV
2 Min Read

ನವದೆಹಲಿ: ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾರನ್ನು ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹುದ್ದೆಯಿಂದ ಕಿಕ್ ಔಟ್ ಮಾಡಲಾಗಿದೆ.

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ನಿಂದ ಪಕ್ಷಕ್ಕೆ ಮುಜುಗರವಾದ ಹಿನ್ನೆಲೆಯಲ್ಲಿ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಹುದ್ದೆಯಿಂದ ಕಿಕ್‍ಔಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ರಾಹುಲ್ ಗಾಂಧಿಯವರ ಟ್ವೀಟ್ ಹಾಗೂ ಸಾರ್ವಜನಿಕ ಭಾಷಣಗಳ ಉಸ್ತುವಾರಿಗಳಿಂದಲೂ ಅವರಿಗೆ ಕೋಕ್ ನೀಡಲಾಗಿದೆ ಎಂದು ವರದಿಯಾಗಿದೆ.

ಈ ಸುದ್ದಿಗೆ ಪೂರಕ ಎಂಬಂತೆ ರಮ್ಯಾ ಅವರು ಈ ಹಿಂದೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ, ಸಂಸದೆ ಎಂದು ಬರೆದುಕೊಂಡಿದ್ದರು. ಆದರೆ ಈಗ ಈ ಎಲ್ಲ ಮಾಹಿತಿಗಳನ್ನು ಡಿಲೀಟ್ ಮಾಡಿದ್ದಾರೆ.

ರಫೇಲ್ ಒಪ್ಪಂದ ಕುರಿತು ರಮ್ಯಾ ಸೆಪ್ಟೆಂಬರ್ 24 ರಂದು ಮೋದಿ ಅವರ ಮೇಣದ ಪ್ರತಿಮೆಯ ಫೋಟೋ ಟ್ವೀಟ್ ಮಾಡಿದ್ದರು. ಈ ಫೋಟೋದಲ್ಲಿ ಮೋದಿ ಸ್ವತಃ ತಮ್ಮ ಪ್ರತಿಮೆ ಮೇಲೆ ಕಳ್ಳ ಎಂದು ಬರೆಯುವಂತೆ ಚಿತ್ರಿಸಲಾಗಿದೆ. ಈ ಫೋಟೋಗೆ ಕಳ್ಳ ಪ್ರಧಾನಿ ಸುಮ್ಮನಿದ್ದಾರೆ (#ChorPMChupHai) ಎಂಬ ಹ್ಯಾಷ್ ಟ್ಯಾಗನ್ನು ರಮ್ಯಾ ಬಳಸಿ ಟ್ವೀಟ್ ಮಾಡಿದ್ದರು. ರಮ್ಯಾ ಮಾಡಿದ ಟ್ವಿಟ್ ನಲ್ಲಿ ನರೇಂದ್ರ ಮೋದಿ ವಿರುದ್ಧ ದ್ವೇಷ ಕಾರುವ ಅಂಶವಿದೆ ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಿಜ್ವಾನ್ ಅಹ್ಮದ್ ದೂರು ನೀಡಿದ್ದರು. ದೂರು ನೀಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿತ್ತು.

ಕರ್ನಾಟಕಕ್ಕೆ ಬಂದಿರಲಿಲ್ಲ
ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಸರಿದ್ದರೂ ಕೂಡ ರಮ್ಯಾರವನ್ನು ದೂರ ಇಡಲಾಗಿತ್ತು. ಒಂದು ವೇಳೆ ಅವರನ್ನು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರೇ ಪಕ್ಷಕ್ಕೆ ನಷ್ಟ ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಾಜ್ಯ ನಾಯಕರು ಪ್ರಚಾರದಿಂದ ದೂರ ಇಟ್ಟಿದ್ದರು ಎನ್ನಲಾಗಿದೆ.

ರಮ್ಯಾರವರು ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡುವ ಭರದಲ್ಲಿ ಪಕ್ಷಕ್ಕೆ ಭಾರೀ ಮುಜುಗರಕ್ಕೀಡು ಮಾಡುವಂತೆ ಮಾಡಿದ್ದರು. ಅಲ್ಲದೇ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯುವಂತೆ ಸಲಹೆ ನೀಡಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

Share This Article
Leave a Comment

Leave a Reply

Your email address will not be published. Required fields are marked *