ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

0 Min Read

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ (H.D Deve Gowda) ಸಹೋದರಿ (ತಂಗಿ) ಜವರಮ್ಮ (Javaramma) (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಹಾಸನದ (Hassan) ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಾ.19) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಇಂದು ಸಂಜೆ ಹೊಳೆನರಸೀಪುರದ ಬಸವನಾಯಕನಹಳ್ಳಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

Share This Article