ಮೈತ್ರಿ ಬಳಿಕ ಮೊದಲ ಬಾರಿಗೆ ಮೋದಿಯನ್ನು ಭೇಟಿಯಾದ ದಳಪತಿಗಳು

Public TV
1 Min Read

ನವದೆಹಲಿ: ಲೋಕಸಭೆ ಚುನಾವಣೆಗೆ (Lok Saba Election) ಬಿಜೆಪಿ (BJP) ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿಗೆ ದಳಪತಿಗಳು (JDS) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (HD Devegowda) ಪುತ್ರರಾದ ಹೆಚ್‌ಡಿ ಕುಮಾರಸ್ವಾಮಿ ಮತ್ತು ಹೆಚ್‌ಡಿ ರೇವಣ್ಣ ಅವರೊಂದಿಗೆ ಮೋದಿ ಅವರನ್ನು ಭೇಟಿಯಾದರು. ಇದನ್ನೂ ಓದಿ: ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಫೈಟರ್‌ ರವಿ ನಿವಾಸದ ಮೇಲೆ ಐಟಿ ದಾಳಿ 

ಭೇಟಿ ಮಾಡಿದ ಬಳಿಕ ಎಕ್ಸ್‌ನಲ್ಲಿ ಫೋಟೋಗಳನ್ನು ಮೋದಿ ಪೋಸ್ಟ್‌ ಮಾಡಿ, ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರನ್ನು ಭೇಟಿಯಾಗಲು ಯಾವಾಗಲೂ ಸಂತೋಷವಾಗುತ್ತದೆ. ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಭೇಟಿಯ ವೇಳೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಜೊತೆಗಿದ್ದರು.

 

Share This Article