68ನೇ ವಯಸ್ಸಿನಲ್ಲಿ ಮೂರನೇ ಮದ್ವೆಯಾದ ಖ್ಯಾತ ವಕೀಲ ಹರೀಶ್ ಸಾಳ್ವೆ

Public TV
1 Min Read

ಲಂಡನ್: ಭಾರತದ ಪ್ರಖ್ಯಾತ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ (Harish Salve) ಅವರು ತಮ್ಮ 68ನೇ ವಯಸ್ಸಿನಲ್ಲಿ 3ನೇ ಮದುವೆಯಾದ್ದಾರೆ.

ಹೌದು. ಲಂಡನ್ ನಲ್ಲಿ (London) ಟ್ರಿನಾ (Trina) ಎಂಬಾಕೆಯ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಸಾಳ್ವೆ ಅವರ ಮದುವೆಯ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಸಾಳ್ವೆ ಅವರ ಈ ಅದ್ಧೂರಿ ವಿವಾಹ ಸಮಾರಂಭದಲ್ಲಿ ನೀತಾ ಅಂಬಾನಿ (Nita Ambani), ಗೋಪಿ ಹಿಂದುಜಾ, ಲಲಿತ್ ಮೋದಿ, ಉಜ್ವಲ್ ರಾವತ್ ಸೇರಿ ಹಲವರು ಭಾಗಿಯಾಗಿದ್ದರು ಎಂಬುದಾಗಿ ವರದಿಯಾಗಿದೆ.

ಮೂಲಗಳ ಪ್ರಕಾರ, ಸಾಳ್ವೆ ಅವರು 1982ರಲ್ಲಿ ಮೀನಾಕ್ಷಿ ಎಂಬವರನ್ನು ಮದುವೆಯಾಗಿ 2020ರಲ್ಲಿ ವಿಚ್ಛೇದನ (Divorce) ನೀಡಿದ್ದರು. ಇವರಿಗೆ ಸಾಕ್ಷಿ ಹಾಗೂ ಸಾನಿಯಾ ಎಂಬ ಇಬ್ಬರು ಮಕ್ಕಳಿದ್ದಾರೆ. 2020ರಲ್ಲಿ ಕಾರೋಲಿನ್ ಬ್ರೊಸಾರ್ಡ್ ಎಂಬಾಕೆಯನ್ನು ವರಿಸಿದ್ದರು. ಇದೀಗ ಟ್ರಿನಾ ಎಂಬಾಕೆಯನ್ನು ವರಿಸುವ ಮೂಲಕ ಮೂರನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಇದನ್ನೂ ಓದಿ: ಮುಂಬೈ ಫ್ಲಾಟ್‌ನಲ್ಲಿ ಗಗನಸಖಿ ಮೃತದೇಹ ಪತ್ತೆ – ಸ್ವೀಪರ್‌ ಬಂಧನ

ನವೆಂಬರ್ 1999 ರಿಂದ ನವೆಂಬರ್ 2002 ರವರೆಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿರುವ ಇವರು ಕುಲಭೂಷಣ್ ಜಾಧವ್ ಪ್ರಕರಣ ಸೇರಿ ಹಲವು ಉನ್ನತ ಮಟ್ಟದ ಪ್ರಕರಣಗಳಲ್ಲಿ ವಕೀಲರಾಗಿದ್ದರು. ಜಾಧವ್ ಪ್ರಕರಣದಲ್ಲಿ 1 ರೂ. ಶುಲ್ಕ ಹಣ ಪಡೆದು ಸುದ್ದಿಯಾಗಿದ್ದರು. 2015ರಲ್ಲಿ ಹರಿಶ್ ಸಾಳ್ವೆ ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್