ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

1 Min Read

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ (Shirin Sharmin Chaudhury) (ಈಗ ಮಾಜಿ) ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು (ಡಿಬಿ) ಇಂದು ಬಂಧಿಸಿದೆ.

ಢಾಕಾದ (Dhaka) ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಶಿರಿನ್ ಅವರನ್ನ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೊಂದರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪತ್ತೇದಾರಿ ವಿಭಾಗದ (Detective Branch) ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ಖಚಿತಪಡಿಸಿದ್ದಾರೆ. ಶಿರಿನ್ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕ‌ರ್ ಆಗಿ 2013 ರಿಂದ 2024ರ ಆಗಸ್ಟ್‌ವರೆಗೆ ಕಾರ್ಯ ನಿರ್ವಹಿಸಿದ್ದರು.

2025ರ ಆಗಸ್ಟ್ 5ರಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಗೊಂಡ 27 ದಿನಗಳ ನಂತರ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಅವರ ದೀರ್ಘಕಾಲದ ಸಂಸದೀಯ ಪಯಣ ಅಂತ್ಯಗೊಂಡಿತ್ತು. ಇದನ್ನೂ ಓದಿ: ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Share This Article