ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್‌ ಆಗಿರುವ ಬೆಂಗಳೂರು ನಾಲ್ವರು ಪೊಲೀಸರು ಸಸ್ಪೆಂಡ್‌

Public TV
2 Min Read

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಕೇರಳ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌, ಹೆಡ್‌ ಕಾನ್‌ಸ್ಟೇಬಲ್‌ಗಳಾದ ವಿಜಯ್‌ ಕುಮಾರ್‌, ಶಿವಾನಿ, ಕಾನ್‌ಸ್ಟೇಬಲ್‌ ಸಂದೇಶ್‌ ಅಮಾನತುಗೊಂಡಿದ್ದಾರೆ. ಎಸಿಪಿ ವರದಿ ಆಧರಿಸಿ ಈ ನಾಲ್ವರನ್ನೂ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

ಏನಿದು ಪ್ರಕರಣ?
ಕೇರಳದಲ್ಲಿ ಕರ್ನಾಟಕದ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿತ್ತು. ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್‌ ಮಾಡಲಾಗಿತ್ತು.

ಬಂಧಿತರು ಬೆಂಗಳೂರು ವೈಟ್‌ ಫೀಲ್ಡ್‌ ಸೆನ್‌ ಪೊಲೀಸರಾಗಿದ್ದಾರೆ. ಇವರನ್ನು ಕೊಚ್ಚಿಯ ಕಲಂಚೇರಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ವಂಚನೆ ಕೇಸ್‌ ರಿಕವರಿಗೆ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

ಉದ್ಯೋಗ ಕೊಡಿಸುವುದಾಗಿ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಮೋಸವಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್‌ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದ. ಈ ಪ್ರಕರಣ ತನಿಖೆಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ನಡೆಸುತ್ತಿದ್ದರು. ಮೊದಲಿಗೆ ಮಡಿಕೇರಿಯ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್‌ನಲ್ಲಿ 2 ಕೋಟಿ ವರ್ಗಾವಣೆಯಾಗಿರುವುದು ಪತ್ತೆಯಾಯಿತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್ ಮತ್ತು ತಂಡ ಕೇರಳಕ್ಕೆ ಹೊರಟಿತ್ತು.

ನೌಶಾದ್ ಎಂಬವನಿಂದ ಆನ್‌ಲೈನ್ ಫ್ರಾಡ್ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಅರೆಸ್ಟ್ ಮಾಡಲು ತೆರಳಿದ್ದ ವೈಟ್ ಫೀಲ್ಡ್ ಸಿಇಎನ್ ಪೊಲೀಸರು, ಬಂಧಿಸದೇ ಇರಲು 3 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ನೌಶಾದ್‌ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದಲ್ಲಿ ತನಿಖೆಗೆ ಎಂದು ಬಂದಿರುವುದಾಗಿ ಬೆಂಗಳೂರು ಪೊಲೀಸರು ತಿಳಿಸಿದ್ದರು. ಆದರೂ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಎಫ್‌ಐಆರ್‌ ದಾಖಲಿಸಲಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್