ಕ್ರೇನ್ ಗೆ ಕಾರು ಡಿಕ್ಕಿ – ನಾಲ್ವರ ದುರ್ಮರಣ, ಮೂವರು ಗಂಭೀರ

Public TV
1 Min Read

ತುಮಕೂರು: ಕ್ರೇನ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕರಜೀವನಹಳ್ಳಿ ಬಳಿ ನಡೆದಿದೆ.

ಕರಜೀವನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 04 ರಲಿ ಈ ಅಪಘಾತ ಸಂಭವಿಸಿದೆ. ವೆಂಕಟೇಶ್, ಶಶಿಕುಮಾರ್ ಮತ್ತು ಹೇಮಂತ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಮತ್ತೋರ್ವನ ಹೆಸರು ತಿಳಿದು ಬಂದಿಲ್ಲ.

ಇವರು ಕಾರಿನಲ್ಲಿ ಬೆಂಗಳೂರಿನಿಂದ ಶಿರಾ ಕಡೆ ತೆರಳುತಿದ್ದರು. ಕರಜೀವನಹಳ್ಳಿ ಬಳಿ ಲಾರಿಯೊಂದು ಕೆಟ್ಟು ನಿಂತಿತ್ತು. ಆ ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು. ಆದರೆ ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಕ್ರೇನ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಪ್ರಜ್ವಲ್(22), ಅಶೋಕ(25) ಮತ್ತು ಅನಿಲ್ ಕುಮಾರ್(20) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಕಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *