ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿ ಮೂವರು ಸಾವು, ಓರ್ವ ಕಣ್ಮರೆ

Public TV
1 Min Read

ಉಡುಪಿ: ನದಿಯಲ್ಲಿ ಚಿಪ್ಪು ಮೀನು ಹಿಡಿಯಲು ಹೋದ ನಾಲ್ವರಲ್ಲಿ ಮೂವರು ನೀರುಪಾಲಾಗಿದ್ದು, ಓರ್ವ ಕಣ್ಮರೆಯಾದ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ  (Brahmavar) ನಡೆದಿದೆ.

ಉಡುಪಿ (Udupi) ಮತ್ತು ಶೃಂಗೇರಿ (Sringeri) ಮೂಲದ ಯುವಕರಾದ ಇಬಾಜ್, ಫಜಾನ್, ಸೂಫಾನ್ ಹಾಗೂ ಫರಾನ್ ರಂಜಾನ್ ಹಬ್ಬಕ್ಕೆ ಬ್ರಹ್ಮಾವರದ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಕುಕ್ಕುಡೆ ಕಿಣಿಯರ ಕುದ್ರು ಸಮೀಪದ ನದಿಗೆ ಸಂಜೆ ದೋಣಿಯಲ್ಲಿ ಮೀನು ಹಿಡಿಯಲು ಏಳು ಯುವಕರ ತಂಡ ತೆರಳಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ

ಮೂವರು ಯುವಕರು ಸಾವಿಗೀಡಾಗಿದ್ದು, ಓರ್ವ ಕಣ್ಮರೆಯಾಗಿದ್ದಾನೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ – ಶ್ರೀನಿವಾಸ್ ಪ್ರಸಾದ್ ಲೇವಡಿ

Share This Article