3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ – ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ FIR

0 Min Read

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಬೂವನಹಳ್ಳಿ ಗ್ರಾಮದ ನಂದೀಶ್.ಬಿ.ಎಲ್ ಹಾಗೂ ದಾಸರಕೊಪ್ಪಲಿನ ಮಧುಕುಮಾರ್.ಎಂ.ಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಜೈಲಿನಲ್ಲಿ ಕೈದಿಗಳ ಮೋಜು-ಮಸ್ತಿ; ಗುಂಡು, ತುಂಡು ಪಾರ್ಟಿ, ಗಾಂಜಾ ಮತ್ತಲ್ಲಿ ತೇಲಾಟ

3,40,28,200 ರೂ. ಹಣವನ್ನು ಹದಿನೈದು ಎಟಿಎಂಗಳಿಗೆ ಹಾಕದೇ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಿಎನ್‌ಎಸ್ 316 (4) 318(4), 3 (5) ಅಡಿ ಪ್ರಕರಣ ದಾಖಲಾಗಿದೆ.

 

Share This Article