ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್‌ ಪ್ರಯಾಣ ಭಾಗ್ಯ? – ಸುಳಿವು ಕೊಟ್ಟ ಡಿಕೆಶಿ

Public TV
1 Min Read

– ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಸಾರಿಗೆ ಸಚಿವರ ಪ್ರತಿಕ್ರಿಯೆ ಏನು?

ಬೆಂಗಳೂರು/ಹುಬ್ಬಳ್ಳಿ: ಶಕ್ತಿ ಯೋಜನೆಯಡಿ (Shakti Scheme) ವಯೋಮಿತಿಗೊಳಪಡಿಸಿ ಗಂಡಸರಿಗೂ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ತಿಳಿಸಿದ್ದಾರೆ. ಆ ಮೂಲಕ ಗಂಡಸರಿಗೂ ಫ್ರೀ ಬಸ್‌ ಪ್ರಯಾಣ ಸೌಲಭ್ಯ ಸಿಗುವ ಸಾಧ್ಯತೆ ಇದೆ.

ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ನಡೆದ ಸಂವಾದದಲ್ಲಿ ಡಿಕೆಶಿ ಈ ಹೇಳಿಕೆ ನೀಡಿದ್ದರು. ಇದನ್ನೂ ಓದಿ: MUDA Scam; ಇ.ಡಿ ವಿಚಾರಣೆ ಬೆನ್ನಲ್ಲೇ ಪಾಲಿಕೆ ನೌಕರ ವಜಾ

ಶಕ್ತಿ ಯೋಜನೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿಬಂದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಶಕ್ತಿ ಯೋಜನೆಯಡಿ ಒಂದು ವಯೋಮಾನದ ವರೆಗಿನ ಗಂಡುಮಕ್ಕಳಿಗೂ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದರು.

ಡಿಕೆಶಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಡಿಸಿಎಂ ಶಿವಕುಮಾರ್ ಮಕ್ಕಳ ಜೊತೆಗೆ ಮಾತನಾಡಿದ್ದಾರೆ. ಆ ಬಗ್ಗೆ ನನಗೆ ಏನು ಮಾಹಿತಿ ಇಲ್ಲ. ಅವರ ಜೊತೆಗೆ ಮಾತನಾಡಿ ಹೇಳುವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೀದರ್ | ಬರೋಬ್ಬರಿ 13,295 ಎಕರೆ ಆಸ್ತಿ ವಕ್ಫ್ ಪಾಲು!

Share This Article