ಪತ್ರಕರ್ತರಿಗೆ ಉಚಿತ ಲ್ಯಾಪ್‌ಟಾಪ್ ಕೊಡುಗೆ

By
1 Min Read

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ವಾರ್ತಾ ಇಲಾಖೆ ಸಹಯೋಗದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.

ಇಲ್ಲಿನ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅನ್ನೋದೊಂದು ಶಕ್ತಿ: ಬಸವರಾಜ್ ರಾಯರೆಡ್ಡಿ

Laptop

ಬಳಿಕ ಮಾತನಾಡಿದ ಅವರು, ಸಮಾಜ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಲೋಪವಾದಾಗ ಅದನ್ನು ಎತ್ತಿ ಹಿಡಿದು ಸರಿಪಡಿಸುವ ಕೆಲಸ ಮಾಧ್ಯಮದವರು ಮಾಡಿದ್ದಾರೆ. ಮಾಧ್ಯಮದವರಿಗೆ ಇತಂಹ ಕಾರ್ಯಕ್ರಮಗಳನ್ನು ನೀಡುವುದರಿಂದ ಅವರು ತಮ್ಮ ಕೆಲಸದಲ್ಲಿ ಮತ್ತಷ್ಟು ಶಕ್ತರಾಗುತ್ತಾರೆ. ಲ್ಯಾಪ್‌ಟಾಪ್ ಪಡೆದ ಪತ್ರಕರ್ತರು ಅದನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಪ.ಜಾತಿ, ಪಂಗಡದವರಿಗೆ ಎಲ್ಲ ರೀತಿಯ ಸವಲತ್ತುಗಳು ಸಿಗಬೇಕು ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳು ಅತ್ಯವಶ್ಯ ಎಂದು ಹೇಳಿದರು.

ಇದೇ ವೇಳೆ ರಾಜ್ಯದ ವಿವಿಧ ಜಿಲ್ಲೆಗಳ ಪ.ಜಾತಿ ಮತ್ತು ಪ.ಪಂಗಡ 25 ಪತ್ರಕರ್ತರಿಗೆ ಸಚಿವರು ಲ್ಯಾಪ್‌ಟಾಪ್ ವಿತರಣೆ ಮಾಡಿದರು. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ 

LAptop

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಆಯುಕ್ತ ಡಾ.ಪಿ.ಎಸ್ ಹರ್ಷ, ಅಕಾಡೆಮಿ ಕಾರ್ಯದರ್ಶಿ ರೂಪಾ, ಸದಸ್ಯರಾದ ಶಿವಾನಂದ ತಗಡೂರು, ಬದ್ರುದ್ದೀನ್, ಕೆ.ಎಂಶಿವರಾಜ್, ಶಿವಕುಮಾರ ಬೆಳ್ಳಿತಟ್ಟೆ, ಲಕ್ಷ್ಮೀನಾರಾಯಣ, ದೇವೇಂದ್ರ ಕಪನೂರು, ನಾಗಾರ್ಜುನ್, ಜಗನ್ನಾಥ ಶೆಟ್ಟಿ, ಗೋಪಾಲ ಯಡಗೆರೆ, ಕಂಕಂ ಮೂರ್ತಿ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *