ಫ್ರೀಂ ಸ್ಕೀಂಗಳನ್ನು ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯಗಳು ಶ್ರೀಲಂಕಾ ಆಗಬಹುದು: ಮೋದಿಗೆ ಅಧಿಕಾರಿಗಳ ಸಲಹೆ

Public TV
1 Min Read

ನವದೆಹಲಿ: ಜನರನ್ನು ಸೆಳೆಯಲು ರಾಜ್ಯಗಳು ಉಚಿತ ಯೋಜನೆಗಳನ್ನು ಜಾರಿ ಮಾಡುತ್ತಿದ್ದರೆ ಆ ರಾಜ್ಯಗಳು ಶ್ರೀಲಂಕಾ, ಗ್ರೀಸ್‌ ದೇಶದಂತೆ ಆರ್ಥಿಕ ಅಧ:ಪತನ ಕಾಣಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಶನಿವಾರ ಪ್ರಧಾನಿ ಮೋದಿ ತಮ್ಮ ಅಧಿಕೃತ ಕಚೇರಿಯಲ್ಲಿ ಎಲ್ಲ ಇಲಾಖೆಯ ಕಾರ್ಯದರ್ಶಿಗಳ ಜೊತೆ ಸುಮಾರು 4 ಗಂಟೆಗಳ ಕಾಲ ದೀರ್ಘ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಇಲಾಖೆಗೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳಲ್ಲಿನ ಲೋಪದೋಷಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಒಂದು ಮೊಟ್ಟೆಗೆ 30 ರೂಪಾಯಿ- ಶ್ರೀಲಂಕಾದಲ್ಲಿ ದಿನಸಿ ಬೆಲೆ ಏರಿಕೆ

sri lanka diesel

ಈ ಸಂದರ್ಭದಲ್ಲಿ ಅಧಿಕಾರಿಗಳು, ಇತ್ತೀಗೆ ಚುನಾವಣೆ ನಡೆದ ರಾಜ್ಯಗಳು ಸೇರಿದಂತೆ ಜನರ ಮೆಚ್ಚುಗೆಗೆ ಪಾತ್ರವಾಗಲು ರಾಜ್ಯ ಸರ್ಕಾರಗಳು ಉಚಿತ ಯೋಜನೆಗಳನ್ನು ಪ್ರಕಟಿಸುತ್ತಿವೆ. ಈ ಯೋಜನೆಗಳಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಣಕಾಸಿನ ಮೇಲೆ ದೀರ್ಘಾವಧಿಯಲ್ಲಿ ಪ್ರಮುಖ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆಯೇ ಹಿಂಸಾತ್ಮಕ ಪ್ರತಿಭಟನೆ – ವಾಹನಗಳು ಸುಟ್ಟು ಭಸ್ಮ

ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಭರವಸೆ ನೀಡುವ ಜನಪರ ಯೋಜನೆಗಳ ಪ್ರವೃತ್ತಿ ಮುಂದುವರಿದರೆ ಕೆಲವು ರಾಜ್ಯಗಳು ಹಣದ ಕೊರತೆಯಿರುವ ಶ್ರೀಲಂಕಾ ಅಥವಾ ಗ್ರೀಸ್‌ನಂತೆಯೇ ದಿವಾಳಿಯಾಗಬಹುದು ಎಂದು ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ವಿವಿಧ ಯೋಜನೆಗಳನ್ನು ಘೋಷಿಸಿವೆ. ರಾಜ್ಯಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ನೀಡಿದ ಅನುದಾನಕ್ಕಿಂತಲೂ ಹೆಚ್ಚಿನ ಅನುದಾನವನ್ನು ಉಚಿತ ಯೋಜನೆಗಳಿಗೆ ಮೀಸಲಿಡುತ್ತಿವೆ. ಹಲವಾರು ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು ಅವು ಒಕ್ಕೂಟದ ಸದಸ್ಯರಾಗಿರದಿದ್ದರೆ ದಿವಾಳಿಯಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *