ಸಾವಿನಲ್ಲೂ ಒಂದಾದ ಸ್ನೇಹಿತರು

By
1 Min Read

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ (Accident) ಯುವಕನೋರ್ವ ಮೃತಪಟ್ಟಿದ್ದು, ಅಪಘಾತದ ಸುದ್ದಿ ತಿಳಿದ ಇನ್ನೋರ್ವ ಸ್ನೇಹಿತ (Friend) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

ಮೃತರನ್ನು ಆನಂದ್ (30) ಹಾಗೂ ಸಾಗರ್ (35) ಎಂದು ಗುರುತಿಸಲಾಗಿದೆ. ಶಿಕಾರಿಪುರ (Shikaripura) ತಾಲೂಕಿನ ಪುಣೇದಹಳ್ಳಿಯ ಆನಂದ್ ಹಾಗೂ ನವರಾಜ್, ಸ್ನೇಹಿತನ ಹುಟ್ಟುಹಬ್ಬಕ್ಕೆ (Birthday) ಕೇಕ್ ತರುವ ಸಲುವಾಗಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಶಿಕಾರಿಪುರ ಮತ್ತು ಶಿರಾಳಕೊಪ್ಪದ ನಡುವೆ ಇರುವ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಪೋ ಬಳಿ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಆನಂದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೋರ್ವ ಯುವಕ ಅದೃಷ್ಟವಶಾತ್ ಬದುಕುಳಿದಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ – ವಾಣಿಜ್ಯ ತೆರಿಗೆಯ ಇಲಾಖೆಯ ಚಾಲಕ ಸಾವು

ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಸುದ್ದಿ ತಿಳಿದ ಆತನ ಸ್ನೇಹಿತ ಸಾಗರ್ ಕೂಡಾ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ದಾವಣಗೆರೆ ದಂಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್- ಪತ್ನಿ, ಮಗುವಿಗೆ ಗುಂಡು ಹಾರಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್