ಹಿಂದೂ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತಾಗಿದೆ: ಯತಿ ನರಸಿಂಹಾನಂದ ವಿರುದ್ಧ ಖರ್ಗೆ ಕಿಡಿ

Public TV
1 Min Read

ನವದೆಹಲಿ: ದೇಶದಲ್ಲಿ ಅಲ್ಪ ಸಂಖ್ಯಾತರ ವಿರುದ್ಧ ದ್ವೇಷ ಭಾಷಣಗಳ ನಿದರ್ಶನಗಳನ್ನು ಕಾಂಗ್ರೆಸ್ ರಾಜ್ಯಸಭೆಯಲ್ಲಿ ಎತ್ತಿ ಹಿಡಿದಿದ್ದು, ಧಾರ್ಮಿಕ ಮುಖಂಡ ಯತಿ ನರಸಿಂಹಾನಂದ ಅವರ ಪ್ರಚೋದಿತ ಭಾಷಣವನ್ನು ಖಂಡಿಸಿದೆ.

ಉಪರಾಷ್ಟçಪತಿ ಎಂ.ವೆಂಕಯ್ಯನಾಯ್ಡು ಅವರು ನಿಯಮ -267ರ ಅಡಿಯಲ್ಲಿ ಸಮಸ್ಯೆಯನ್ನು ಪ್ರಸ್ತಾಪಿಸಲು ಅವಕಾಶ ನೀಡಲಿಲ್ಲವಾದರೂ, ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಹತ್ಯೆಗೆ ಕರೆಗೆ ಸಂಬಂಧಿಸಿದ ಉಲ್ಲೇಖಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಸೂಚಿಸಿದ್ದರು. ಇದನ್ನೂ ಓದಿ: ಮುಸ್ಲಿಮನೊಬ್ಬ ಪ್ರಧಾನಿಯಾದರೆ ಶೇ.50ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ: ಯತಿ ನರಸಿಂಹಾನಂದ್

yathi

ಈ ಸಂಬಂಧ ರಾಜ್ಯಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಯತಿ ನರಸಿಂಹಾನಂದ ಅವರು ಹರಿದ್ವಾರದಿಂದ ದೆಹಲಿಯವರೆಗೂ ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ಯಾವುದೇ ಸಮುದಾಯ, ಅಲ್ಪಸಂಖ್ಯಾತ ಅಥವಾ ಬಹುಸಂಖ್ಯಾತರ ವಿರುದ್ಧ ಯಾರೂ ದ್ವೇಷಪೂರಿತ ಭಾಷಣಗಳನ್ನು ಮಾಡಬಾರದು. ಆದರೆ ಅರ್ಚಕರ ಮಾತಿನಿಂದ ಭಾನುವಾರ ಮತ್ತೊಂದು ಗದ್ದಲ ಉಂಟಾಗಿದೆ. ಹಿಂದೂಗಳು ತಮ್ಮ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತೆ ಪ್ರೇರೇಪಿಸಿದೆ ಎಂಬುದನ್ನು ನಿದರ್ಶನಗಳೊಂದಿಗೆ ಉಲ್ಲೇಖಿಸಿದರು. ಇದನ್ನೂ ಓದಿ:  ಮೈಕ್ ತೆಗೆಸದಿದ್ದರೆ, ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ: ಮುತಾಲಿಕ್

ಯಾರೂ ಯಾವುದೇ ಒಂದು ಸಮುದಾಯದ ವಿರುದ್ಧ ಮಾತನಾಡುವಂತಿಲ್ಲ, ಹಾಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *