ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ- ಕಿಚ್ಚ ಸುದೀಪ್

Public TV
1 Min Read

ಬೆಂಗಳೂರು: ನಾನು ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ, `ಸುಮಾರು ವರ್ಷಗಳ ಪರಿಚಯದ ನನ್ನ ಕೆಲವು ಗೆಳೆಯರಿಗಾಗಿ ನಾನು ಚುನಾವಣಾ ಪ್ರಚಾರಕ್ಕೆ ಸೇರಿದೆ. ಇವರು ಒಂದಲ್ಲ ಒಂದು ರೀತಿ ನನ್ನ ಜೊತೆಯಿದ್ದು, ನನ್ನ ಕಠಿಣ ಸಮಯದಲ್ಲಿ ನನ್ನ ಬೆನ್ನೆಲುಬಾಗಿ ನಿಂತವರು. ಸಣ್ಣದು ಅಥವಾ ದೊಡ್ಡದು ಎಂಬ ವಿಷಯವಲ್ಲ. ಅವರು ಅಂದು ನಿಂತದ್ದು ವಿಷಯ. ಈಗ ಅವರಿಗಾಗಿ ನಾನು ಅಲ್ಲಿರುವುದು ಬಹುಶಃ ಅವರು ನನ್ನಿಂದ ಪಡೆಯುವ ಒಂದು ಸಣ್ಣ ಬೆಂಬಲ. ಇದು ಕನಿಷ್ಟ ನಾನು ಅವರಿಗಾಗಿ ಮಾಡಬಹುದಾದದ್ದು ಕೂಡ. ಅದರಲ್ಲಿ ಯಾವುದೇ ವಿಷಾದವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ ತಿಂಡಿ ತಿಂದು ಮಾಲಕಿಗೆ 10 ಸಾವಿರ ರೂ. ಕೊಟ್ಟ ಸುದೀಪ್!

ನನ್ನ ಗೆಳೆಯರ ಹಾಗೂ ಅಭಿಮಾನಿಗಳ ಸಲುವಾಗಿ ನಾನು ಮುಂದಿನ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ. ಎಲ್ಲರಿಗೂ ನನ್ನ ಅವಶ್ಯಕತೆ ಇದೆ ಹಾಗೂ ನನ್ನ ಉಪಸ್ಥಿತಿಯಿಂದ ಫಲಿತಾಂಶಗಳು ಬದಲಾಗುತ್ತದೆ ಎಂದು ನಾನು ನನ್ನನ್ನು ದೊಡ್ಡ ಮಟ್ಟಕ್ಕೆ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಅಂದಿದ್ದಾರೆ. ಇದನ್ನೂ ಓದಿ: ನಟ ಸುದೀಪ್ ರೋಡ್ ಶೋ ರದ್ದು

ನಾನು ಒಬ್ಬ ಕಲಾವಿದ ನನ್ನ ಪಯಣದಲ್ಲಿ ನನ್ನ ಜೊತೆ ಇದ್ದಂತಹ ಗೆಳೆಯರು ಹಾಗೂ ಅಭಿಮಾನಿಗಳ ಅಭಿಪ್ರಾಯ ಮುಖ್ಯವಾಗುತ್ತದೆ. ಇದು ನಾನು ತೆಗೆದುಕೊಳ್ಳುತ್ತಿರುವ ಕಠಿಣ ನಿರ್ಧಾರ. ಆದರೂ ಈ ನಿರ್ಧಾರ ನನ್ನ ಜೊತೆಯಿರುವ ನನ್ನ ಅಭಿಮಾನಿಗಳು ಹಾಗೂ ಗೆಳೆಯರ ಸಲುವಾಗಿ ಕೈಗೊಳ್ಳುತ್ತಿದ್ದೇನೆ. ನಾನು ಯಾವುದೇ ರೀತಿ ನನ್ನ ಕ್ರಮಗಳಲ್ಲಿ ಅವರಿಗೆ ನೋವುಂಟು ಮಾಡಲು ಇಚ್ಛಿಸುವುದಿಲ್ಲ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್‍ರನ್ನು ಭೇಟಿ ಮಾಡಿದ ಸಲ್ಮಾನ್ ಖಾನ್ ಸಹೋದರರು!

ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಅವರು ತನ್ನ ಸ್ನೇಹಿತರ ಪರವಾಗಿ ಇತ್ತೀಚೆಗೆ ಪ್ರಚಾರ ನಡೆಸುತ್ತಿದ್ದರು. ಆದ್ರೆ ಆ ಬಳಿಕ ಕಿಚ್ಚ ನಡೆಗೆ ಅಭಿಮಾನಿಗಳು ಗರಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಚ್ಚ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಶ್ರೀರಾಮಲು ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಕಿಚ್ಚ ಸುದೀಪ್!

Share This Article
Leave a Comment

Leave a Reply

Your email address will not be published. Required fields are marked *