ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

Public TV
1 Min Read

ನವದೆಹಲಿ: ಪೆಟ್ರೋಲ್, ಡೀಸೆಲ್ ದರ 3ನೇ ಬಾರಿಗೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 80 ಪೈಸೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.11 ರೂ. ಆಗಿದ್ದರೆ ಡೀಸೆಲ್ ಬೆಲೆ 87.37 ರೂ. ಆಗಿದೆ. ದೆಹಲಿಯಲ್ಲಿ 80 ಪೈಸೆ ಏರಿಕೆಯಾಗಿದ್ದು ಪ್ರತಿ ಲೀಟರ್ ಪೆಟ್ರೋಲ್‍ದರ 97.81ರೂ. ಹಾಗೂ ಡಿಸೇಲ್ ಬೆಲೆ 89.07ರೂ.ಗೆ ಮಾರಾಟವಾಗುತ್ತಿದೆ.

ಮುಂಬೈನಲ್ಲೂ ಪೆಟ್ರೋಲ್ 80 ಪೈಸೆ, ಡೀಸೆಲ್ 85 ಪೈಸೆ ಏರಿಕೆಯಾಗಿದ್ದು ಲೀಟರ್ ಪೆಟ್ರೋಲ್ 112.51 ಹಾಗೂ ಡೀಸೆಲ್ 96.70ಕ್ಕೆ ತಲುಪಿದೆ. ಚೆನ್ನೈನಲ್ಲಿ 76 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ದರ 103.67 ಹಾಗೂ ಡೀಸೆಲ್ ದರ 93.71 ಮಾರಾಟವಾಗುತ್ತಿದೆ. ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸ್ವಾಗತ: ಡಿಕೆಶಿ

ಕೋಲ್ಕತ್ತಾದಲ್ಲಿ ಪೆಟ್ರೋಲ್, ಡೀಸೆಲ್ ದರ ಕ್ರಮವಾಗಿ ಪ್ರತಿ ಲೀಟರ್‌ಗೆ 84 ಪೈಸೆ ಏರಿಕೆಯಾಗಿದ್ದು ಪೆಟ್ರೋಲ್ 106.34 ಹಾಗೂ ಡೀಸೆಲ್ 91.42ಕ್ಕೆ ಮಾರಾಟವಾಗುತ್ತಿದೆ.

137 ದಿನಗಳ ಬಳಿಕ ಏರಿಕೆಯಾಗಿತ್ತು. 137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದೆ. ಮಾರ್ಚ್ 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿತ್ತು. ಇದನ್ನೂ ಓದಿ: ಮಾತುಬಾರದ ಬಾಲಕನ ಕೊಂದು ಗೋಣಿ ಚೀಲದಲ್ಲಿ ತುಂಬಿ ಎಸೆದ್ರು

ಕಳೆದ ವರ್ಷ ನವೆಂಬರ್‍ನಿಂದ ಈವರೆಗೂ ಕಚ್ಚಾ ತೈಲ ದರದಲ್ಲಿ ಶೇ.25ರಷ್ಟು ಮಾತ್ರವೇ ಏರಿಕೆಯಾಗಿತ್ತು. ರಷ್ಯಾ, ಉಕ್ರೇನ್ ನಡುವಿನ ಸಂಘರ್ಷದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಬಾರಿ ಏರಿಕೆ ಕಂಡಿದ್ದು ಈಗ ಭಾರತದ ಮೇಲೂ ಪರಿಣಾಮ ಬಿದ್ದಿದೆ.

ಸದ್ಯ ಬೆಲೆ ಏರಿಕೆಯು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಪ್ರತಿ ಪಕ್ಷಗಳೂ ಬಿಜೆಪಿ ಸರ್ಕಾರದಿಂದಲೇ ಬೆಲೆ ಏರಿಕೆಯಾಗಿದೆ ಎಂದು ಆರೋಪಿಸಿ ವಾಗ್ದಾಳಿ ನಡೆಸುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *