ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾದ ಜನಾರ್ದನ ರೆಡ್ಡಿ – ಕುತೂಹಲ ಮೂಡಿಸಿದ ಗಣಿಧಣಿ ನಡೆ

Public TV
1 Min Read

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ನಡೆಯಲಿರುವ ಚುನಾವಣೆ (Rajya Sabha Election) ರಂಗೇರುತ್ತಿದ್ದು, ಕೆಆರ್‌ಪಿಪಿ (KRPP) ಶಾಸಕ ಜನಾರ್ದನ ರೆಡ್ಡಿಯವರು ದಿಢೀರ್ ಆಗಿ ಸಿಎಂ ಸಿದ್ದರಾಮಯ್ಯ (Siddaramaiah) ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಜನಾರ್ದನ ರೆಡ್ಡಿಯವರ (G.Janardhana Reddy) ನಡೆ ಕುತೂಹಲ ಮೂಡಿಸಿದೆ.

ಇಂದು (ಸೋಮವಾರ) ಬೆಳಗ್ಗೆ ಕಾವೇರಿ ನಿವಾಸಕ್ಕೆ ಜನಾರ್ದನ ರೆಡ್ಡಿಯರು ತೆರಳಿದ್ದು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಅವರು ಕಾಂಗ್ರೆಸ್‍ಗೆ ಬೆಂಬಲ ಕೊಡುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ವೇಳೆ ಡಿಸಿಎಂ ಡಿಕೆಶಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಬಟ್ಟೆ ಕ್ಲೀನ್ ಇಲ್ಲವೆಂದು ಮೆಟ್ರೋದೊಳಗೆ ಬಿಡದ ಸಿಬ್ಬಂದಿ ವಜಾ: MD

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದೇನೆ. ಆನೆಗುಂದಿ ಉತ್ಸವಕ್ಕೆ ಆಹ್ವಾನ ನೀಡಲು ಹೋಗಿದ್ದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಎಲ್ಲರೂ ಮನವಿ ಮಾಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಹೇಳಿ ಕುತೂಹಲ ಹುಟ್ಟುಹಾಕಿದ್ದಾರೆ. ಇದನ್ನೂ ಓದಿ: ಹಿಂದೂಗಳಿಗೆ ಮತ್ತೆ ಜಯ- ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಹೈಕೋರ್ಟ್‌ ನಕಾರ

Share This Article