ಬೆಂಗಳೂರು: ಹಿಂದೂ ಆಗಲಿ, ಮುಸ್ಲಿಂ (Hindu Or Muslims) ಆಗಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ರೆ ಪೊಲೀಸರು ಕ್ರಮ ತೆಗೆದುಕೊಳ್ತಾರೆ. ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು ಅಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ರು.
ಬೆಂಗಳೂರಿನಲ್ಲಿ (Bengaluru) ಮಾತಾಡಿದ ಪರಮೇಶ್ವರ್, ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಸಮರ್ಥಿಸಿಕೊಂಡರು. ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ. ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಆಗಿರಲಿ, ಹಿಂದೂ ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೆ ಜನರನ್ನೆಲ್ಲ ಒಕ್ಕಲೆಬ್ಬಿಸುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ನಿವಾಸದ ಮುಂದೆ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಚಾಲಕ ಪಾರು
ಬಿಜೆಪಿಯವ್ರು ವೀರಾವೇಷದಲ್ಲಿ ಮಾತಾಡಿ, ಬಳಸಬಾರದ ಪದಗಳನ್ನು ಬಳಸುವುದರಿಂದ ಏನು ಸಾಧನೆ ಮಾಡುತ್ತಾರೆ? ಅವರು ರಾಜಕೀಯ ಕಾರಣಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ಯಾರು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೋ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: ನೇಪಾಳದ ಪ್ರಧಾನಿ ರೇಸ್‌ನಲ್ಲಿ ಬೆಂಗ್ಳೂರು ನಂಟಿನ ಬಲೇನ್ ಶಾ ಹೆಸರು ಮುನ್ನಲೆಗೆ
ಎಎಸ್ಪಿ ವರ್ಗಾವಣೆಗೆ ಸಮರ್ಥನೆ
ಇನ್ನೂ ಮದ್ದೂರು ಗಲಾಟೆ ಹಿನ್ನೆಲೆಯಲ್ಲಿ ಎಎಸ್‌ಪಿ ತಿಮ್ಮಯ್ಯ ವರ್ಗಾವಣೆ ಮಾಡಿದ್ದನ್ನು ಗೃಹ ಸಚಿವರು ಸಮರ್ಥಿಸಿಕೊಂಡರು. ಮದ್ದೂರಿನಲ್ಲಿ ಭದ್ರತಾ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಎಎಸ್‌ಪಿ ವರ್ಗಾವಣೆ ಮಾಡಿದ್ದಾರೆ. ಆಂತರಿಕವಾಗಿ ಎಲ್ಲಿ ಲೋಪ ಕಂಡಿದೆ, ಅದಕ್ಕೆ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಒಬ್ಬ ಇನ್‌ಸ್ಪೆಕ್ಟರ್ ಆಗಿರಬಹುದು, ಸಬ್ ಇನ್‌ಸ್ಪೆಕ್ಟರ್ ಆಗಿರಬಹುದು, ಅವರ ಕರ್ತವ್ಯ ಲೋಪ ಕಂಡು ಬಂದಾಗ ಇಲಾಖೆಯಿಂದ ಕ್ರಮ ತೆಗೆದುಕೊಳ್ಳುತ್ತಾರೆ. ಇದರಲ್ಲೂ ಲೋಪ ಕಂಡುಬಂದಿದ್ದು ಆಂತರಿಕವಾಗಿ ಇಲಾಖೆಯಿಂದ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.