G20 Summit – ಜಾಗತಿಕ ಜೈವಿಕ ಇಂಧನ ಮೈತ್ರಿಕೂಟಕ್ಕೆ ಮೋದಿ ಚಾಲನೆ

Public TV
1 Min Read

ನವದೆಹಲಿ: ಜಾಗತಿಕ ಜೈವಿಕ ಇಂಧನ ಮೈತ್ರಿಕೂಟವನ್ನು (Biofuels Alliance) ಭಾರತ ಆರಂಭಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಘೋಷಿಸಿದ್ದಾರೆ. ಜಿ20 ರಾಷ್ಟ್ರಗಳು ಈ ಮೈತ್ರಿಗೆ ಸೇರುವಂತೆ ವಿಶ್ವದ ನಾಯಕರಿಗೆ ಆಹ್ವಾನ ನೀಡಿದ್ದಾರೆ.

ಜಿ20 ಶೃಂಗಸಭೆಯ (G20 Summit) ಅಧಿವೇಶನದಲ್ಲಿ ‘ಒಂದು ಭೂಮಿ’ (One Earth) ವಿಷಯದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಾಗತಿಕವಾಗಿ ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣವನ್ನು 20%ಕ್ಕೆ ತರುವ ತಮ್ಮ ಮನವಿಯೊಂದಿಗೆ ಮೈತ್ರಿಕೂಟಕ್ಕೆ ಸೇರಲು ಜಿ20 ರಾಷ್ಟ್ರಗಳನ್ನು ಕೇಳಿಕೊಂಡಿದ್ದಾರೆ.

ಇಂದು ಇಂಧನ ಮಿಶ್ರಣ ಕ್ಷೇತ್ರದಲ್ಲಿ ಎಲ್ಲಾ ದೇಶಗಳು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವಾಗಿದೆ. ಜಾಗತಿಕ ಮಟ್ಟದಲ್ಲಿ ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣವನ್ನು 20% ವರೆಗೆ ತರುವುದು ನಮ್ಮ ಪ್ರಸ್ತಾಪವಾಗಿದೆ. ಅಥವಾ ಪರ್ಯಾಯವಾಗಿ, ಜಾಗತಿಕ ಒಳಿತಿಗಾಗಿ ನಾವು ಮತ್ತೊಂದು ಮಿಶ್ರಣವನ್ನು ಅಭಿವೃದ್ಧಿಪಡಿಸಲು ಕೆಲಸ ಮಾಡಬಹುದು. ಇದು ಸ್ಥಿರವಾದ ಇಂಧನ ಪೂರೈಕೆಯನ್ನು ಖಾತ್ರಿಪಡಿಸುತ್ತದೆ ಮತ್ತು ಹವಾಮಾನ ಭದ್ರತೆಗೆ ಕೊಡುಗೆ ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಜಿ20 ಸಭೆಯಲ್ಲಿ ರಷ್ಯಾ-ಉಕ್ರೇನ್‌ ವಾರ್‌; ವಿಶ್ವ ನಾಯಕರ ಘೋಷಣೆಯೇನು?

ಅಧಿವೇಶನದಲ್ಲಿ ಸೌದಿ ಅರೇಬಿಯಾದ ರಾಜ ಮೊಹಮ್ಮದ್ ಬಿನ್ ಸಲ್ಮಾನ್, ಅಮೆರಿಕದ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇತರರು ಇದ್ದರು. ಇದನ್ನೂ ಓದಿ: G20 ಒಕ್ಕೂಟಕ್ಕೆ ಆಫ್ರಿಕನ್ ಯೂನಿಯನ್ ಸೇರ್ಪಡೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್